Webdunia - Bharat's app for daily news and videos

Install App

ಕಾರ್ಮಿಕರಿಗೆ ಕನಿಷ್ಟ ವೇತನ ದಿನಕ್ಕೆ 350 ರೂ.ಗೆ ಕೇಂದ್ರಸರ್ಕಾರ ಏರಿಕೆ

Webdunia
ಬುಧವಾರ, 31 ಆಗಸ್ಟ್ 2016 (18:58 IST)
ಕೇಂದ್ರ ಸರ್ಕಾರ ಮಂಗಳವಾರ ಕುಶಲರಹಿತ ಕೃಷಿಯೇತರ ಕಾರ್ಮಿಕರ ಕನಿಷ್ಟ ವೇತನವನ್ನು ಪ್ರಸಕ್ತ ದಿನಕ್ಕೆ 246 ರೂ.ಗಳಿಂದ 350 ರೂ. ಹೆಚ್ಚಳವನ್ನು ಪ್ರಕಟಿಸಿದೆ. ಶುಕ್ರವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಕಾರ್ಮಿಕ ಸಂಘಟನೆಗಳನ್ನು ಸಾಂತ್ವನಗೊಳಿಸುವುದು ಇದರ ಹಿಂದಿನ ಉದ್ದೇಶವಾಗಿದೆ.

ವಿತ್ತ ಸಚಿವ ಅರುಣ್ ಜೇಟ್ಲಿ ವರದಿಗಾರರ ಜತೆ ಮಾತನಾಡುತ್ತಾ, 2014-15 ಮತ್ತು 2015-16ರ ಸಾಲಿನ ಬೋನಸ್‌ಗಳನ್ನು ಪರಿಷ್ಕೃತ ನಿಯಮಗಳನ್ನು ಆಧರಿಸಿ ಕೇಂದ್ರ ಸರ್ಕಾರದ ನೌಕರರಿಗೆ ಪಾವತಿಸಲಾಗುತ್ತದೆ ಎಂದು ಹೇಳಿದರು.
 
ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ನಲ್ಲಿ ಬಾಕಿಯಿರುವ ಬೋನಸ್ ಪಾವತಿ ಕುರಿತ ಕೇಸ್‌ಗಳನ್ನು ಇತ್ಯರ್ಥಗೊಳಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು. 
 
ಒಂದೂವರೆ ವರ್ಷಗಳಲ್ಲಿ ಅಂತರ ಸಚಿವಾಲಯ ಸಮಿತಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜತೆ ಸಭೆ ನಡೆಸಿತ್ತು. ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಮಂಡಿಸಿವೆ. ಕೆಲವು ಕಾರ್ಮಿಕ ಸಂಬಂಧಿತ ಮತ್ತು ಇನ್ನೂ ಕೆಲವು ಆರ್ಥಿಕ ನೀತಿ ವಿಷಯಗಳಿಗೆ ಸಂಬಂಧಿಸಿವೆ. ಶಿಫಾರಸುಗಳ ಆಧಾರದ ಮೇಲೆ ಸರ್ಕಾರ ಕೆಲವು ನಿರ್ಧಾರಗಳನ್ನು ಕೈಗೊಂಡಿದೆ ಎಂದು ಜೇಟ್ಲಿ ವಿವರಿಸಿದರು.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments