Webdunia - Bharat's app for daily news and videos

Install App

ಯಮುನಾ ನದಿ ಸ್ವಚ್ಛತೆಗೆ ಸರ್ಕಾರ ಆದ್ಯತೆ: ಸಿಎಂ ರೇಸ್‌ನಲ್ಲಿ ಮಂಚೂಣಿಯಲ್ಲಿರುವ ಪರ್ವೇಶ್‌ ವರ್ಮಾ

Sampriya
ಭಾನುವಾರ, 9 ಫೆಬ್ರವರಿ 2025 (15:04 IST)
Photo Courtesy X
ನವದೆಹಲಿ: ಯಮುನಾ ನದಿ ಸ್ವಚ್ಛತೆಗೆ ಬಿಜೆಪಿ ಸರ್ಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರನ್ನೇ ಸೋಲಿಸುವ ಮೂಲಕ ಬಿಜೆಪಿಯ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ನಾಯಕ ಪರ್ವೇಶ್‌ ವರ್ಮಾ ಹೇಳಿದ್ದಾರೆ.

ಅವರ ಹುಟ್ಟೂರಾದ ಮುಂಡಕದಲ್ಲಿ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಸಾಹಿಬ್ ಸಿಂಗ್‌ ವರ್ಮಾ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಂದೆಯವರ ಕನಸಿನಂತೆ ಅಪೂರ್ಣವಾದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಬದ್ಧರಾಗಿರುವುದಾಗಿ ಅವರು ತಿಳಿಸಿದ್ದಾರೆ.

ದೆಹಲಿ ಜನತೆಯ ಆಶೀರ್ವಾದ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಸಮಾಜದ ಎಲ್ಲ ವರ್ಗಗಳ ಕಾಳಜಿ ವಹಿಸುವ ಮೂಲಕ ಸುಂದರವಾದ ದೆಹಲಿ ನಿರ್ಮಿಸಲು ಪರಿಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.
‌‌
ಪರ್ವೇಶ್‌ ವರ್ಮಾ ಅವರು 2014ರಿಂದ 2024ರವರೆಗೆ ಪಶ್ಚಿಮ ದೆಹಲಿಯ ಸಂಸದರಾಗಿದ್ದರು. ನವದೆಹಲಿ ಕ್ಷೇತ್ರದಲ್ಲಿ ಅರವಿಂದ ಕೇಜ್ರಿವಾಲ್ ವಿರುದ್ಧ ಪರ್ವೇಶ್‌ ವರ್ಮಾ 4,089 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಎಎಪಿಗೆ ದೊಡ್ಡ ಹೊಡೆತ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments