Webdunia - Bharat's app for daily news and videos

Install App

ಸಿದ್ದರಾಮಯ್ಯ ವಿಷ್ಯದಲ್ಲಿ ರಾಜ್ಯಪಾಲರ ಆತುರದ ನಿರ್ಧಾರ: ಅಭಿಷೇಕ್‌ ಸಿಂಘ್ವಿ ವಾದ

Sampriya
ಗುರುವಾರ, 12 ಸೆಪ್ಟಂಬರ್ 2024 (14:55 IST)
Photo Courtesy X
ಬೆಂಗಳೂರು: ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇದು ನಡೆಯಿತು.

ವಾದ-ವಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ನ್ಯಾಯಮೂರ್ತಿಗಳು ಮುಂದೂಡಿದರು.

ಜನಪ್ರತಿನಿಧಿಗಳ ವಿರುದ್ಧ ಪ್ರಾಸಿಕ್ಯೂಷನ್ ಕೊಡುವಾಗ ವಾಕ್ ಆ್ಯಂಡ್‌ ಗೋ ರೀತಿಯಲ್ಲಿ ನಿರ್ಧಾರಗಳು ಆಗಬಾರದು. ರಾಜ್ಯಪಾಲರ ವಿವೇಚನಾ ಅಧಿಕಾರಕ್ಕೆ ಮಾತ್ರ ಸಿಮೀತವಾಗಿದೆ ಎಂದು ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಆರಂಭಿಸಿದರು.


ರಾಜ್ಯಪಾಲರ ಆದೇಶದಲ್ಲಿ ಒಂದೆ ಅಂಶ ಮುಖ್ಯವಾಗಿದೆ. ನಾನು ವಿವೇಚನಾಧಿಕಾರವನ್ನು ಬಳಸುತ್ತಿದ್ದೇನೆ. ಸಚಿವ ಸಂಪುಟದ ಯಾವುದೇ ನಿರ್ಧಾರವನ್ನು ಪರಿಗಣಿಸಿಲ್ಲ ಎಂದಿದೆ. ಆ ದರೆ ರಾಜ್ಯಪಾಲರಿಗೆ ಸಿಎಂ ಹಗರಣದಲ್ಲಿ ಭಾಗಿಯಾಗಿರುವುದಕ್ಕೆ ಮೇಲ್ನೊಟಕ್ಕೆ ಯಾವುದೇ ಸಾಕ್ಷಿ ಇದೆ ಎಂದು ಉಲ್ಲೇಖಿಸಿಲ್ಲ.

ರಾಜ್ಯಪಾಲರು ವಿವೇಚನೆಯನ್ನು ಹೇಗೆ ಬಳಸಿದೆ ಎಂಬುದನ್ನು ತಿಳಿಸಬೇಕಿತ್ತು. ತಾರತಮ್ಯ ಮಾಡಿಲ್ಲವೆಂಬುದನ್ನು ರಾಜ್ಯಪಾಲರು ವಾದಿಸಬೇಕಿತ್ತು. ಇನ್ನೊಂದು ಪ್ರಮುಖ ಅಂಶವೆಂದರೆ ರಾಜ್ಯಪಾಲರ ಐದಾರು ಪುಟದ ಆದೇಶದಲ್ಲಿ ಬೇರೇನೂ ಹೇಳಿಲ್ಲ. ನಾನು ಸಚಿವ ಸಂಪುಟದ ಆದೇಶ ಪಾಲಿಸಬೇಕಿಲ್ಲವೆಂದು ರಾಜ್ಯಪಾಲರು ಹೇಳಿದ್ದಾರೆ. ಆದರೆ ಸಿಎಂ ಪಾತ್ರ ಇದೆಯೇ ಎಂಬುದನ್ನು ರಾಜ್ಯಪಾಲರು ತಿಳಿಸಿಲ್ಲ. ಯಾವುದಾದರೂ ಕಡತಕ್ಕೆ ಸಿಎಂ ಸಹಿ ಹಾಕಿದ್ದಾರೆಯೇ ಹೇಳಿಲ್ಲ. ಹೀಗಾಗಿ ರಾಜ್ಯಪಾಲರು ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ. ಆತುರದ ನಿರ್ಧಾರ ಕೈಗೊಂಡಿದ್ದಾರೆ ಎಂದು ವಾದ ಮಂಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments