Daily Horoscope
✕

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

Sampriya
ಶುಕ್ರವಾರ, 9 ಮೇ 2025 (17:55 IST)
Photo Credit X
ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕ್ ವಿರುದ್ಧ ಭಾರತ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ನಡೆಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮತ್ತು ಸಶಸ್ತ್ರ ಪಡೆಗಳಿಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ಮತ್ತು ಇಡೀ ದೇಶಕ್ಕೆ ನ್ಯಾಯ ಒದಗಿಸಲು ತೆಗೆದುಕೊಳ್ಳಲಾದ ಈ ಕ್ರಮವು ಇಡೀ ದೇಶದ ಸ್ವಾಭಿಮಾನ ಮತ್ತು ಧೈರ್ಯವನ್ನು ಹೆಚ್ಚಿಸಿದೆ ಎಂದು ಭಾಗವತ್ ತಿಳಿಸಿದ್ದಾರೆ.

ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ತೆಗೆದುಕೊಳ್ಳುತ್ತಿರುವ ಮಿಲಿಟರಿ ಕ್ರಮವು ದೇಶದ ಭದ್ರತೆಗೆ ಅಗತ್ಯ ಮತ್ತು ಅನಿವಾರ್ಯ ಹೆಜ್ಜೆಯಾಗಿದೆ. ರಾಷ್ಟ್ರೀಯ ಬಿಕ್ಕಟ್ಟಿನ ಈ ಸಮಯದಲ್ಲಿ ಇಡೀ ದೇಶವು ಸರ್ಕಾರ ಮತ್ತು ಸಶಸ್ತ್ರ ಪಡೆಗಳೊಂದಿಗೆ ಮುಕ್ತ ಮನಸ್ಸಿನಿಂದ ನಿಂತಿದೆ ಎಂದು ಭಾಗವತ್ ತಿಳಿಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ಸರ್ಕಾರ ಹೊರಡಿಸುವ ಆದೇಶಗಳನ್ನು ಸಂಪೂರ್ಣವಾಗಿ ಪಾಲಿಸಬೇಕು. ಎಲ್ಲಾ ನಾಗರಿಕರು ತಮ್ಮ ದೇಶಭಕ್ತಿಯನ್ನು ಪ್ರದರ್ಶಿಸಲು ಮತ್ತು ಅಗತ್ಯವಿರುವಲ್ಲಿ ಸೈನ್ಯ ಮತ್ತು ಆಡಳಿತದೊಂದಿಗೆ ಸಹಕರಿಸಲು ಸಿದ್ಧರಾಗಿರಬೇಕು ಎಂದು ಭಾಗವತ್ ಮನವಿ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್: ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧಎಫ್ಐಆರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎದೆ ಝಲ್ಲೆನಿಸುವ ವಿಡಿಯೋ.. ರೀಲ್ಸ್ ಗಾಗಿ ಹುಲಿ ಜೊತೆ ತುಂಟಾಟ: ಕೊನೆಗೆ ಆಗಿದ್ದು ಭೀಕರ ದುರಂತ Video

ರಾಹುಲ್ ಗಾಂಧಿ ಕಾಲರ್ ಹಿಡಿದು ಎಳೆದ್ರು, ಮೋದಿ ಕೈ ಜೋಡಿಸಿದ್ರು, ಇದೇ ನೋಡಿ ನಮಗೂ ನಿಮಗೂ ವ್ಯತ್ಯಾಸ: ಡಿಕೆಶಿಗೆ ಬಿಜೆಪಿ ಟಾಂಗ್ Video

ಪಿಂಕ್ ಲೈನ್ ಮೆಟ್ರೋ ಇಂದಿನಿಂದ ಶುರು: ಪ್ರಯಾಣಿಕರಿಗೆ ಗುಲಾಬಿ ಕೊಟ್ಟು ವೆಲ್ ಕಮ್ ಮಾಡಿದ ಸಚಿವ ಕೃಷ್ಣ ಭೈರೇಗೌಡ

ಮುಂದಿನ ಸುದ್ದಿ
Show comments