Select Your Language

Notifications

webdunia
webdunia
webdunia
webdunia

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್
ಲಕ್ನೋ , ಭಾನುವಾರ, 5 ಮಾರ್ಚ್ 2023 (09:24 IST)
ಲಕ್ನೋ : ರಾಮಜನ್ಮಭೂಮಿ -ಬಾಬ್ರಿ ಮಸೀದಿ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಯೋಜನೆಗೆ ಅಯೋಧ್ಯಾ ಅಭಿವೃದ್ಧಿ ಪ್ರಾಧಿಕಾರ ಅಂತಿಮ ಅನುಮೋದನೆ ನೀಡಿದೆ.
 
ಸುಪ್ರೀಂ ತೀರ್ಪಿನ ಅನುಸಾರ ಮಸೀದಿ ನಿರ್ಮಾಣ ಮಾಡಲು ಉತ್ತರ ಪ್ರದೇಶ ಸರ್ಕಾರವು 5 ಎಕರೆ ಭೂಮಿ ಮಂಜೂರು ಮಾಡಿದೆ. `ಮಸೀದಿ ನಿರ್ಮಾಣ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಒಂದೆರಡು ದಿನಗಳಲ್ಲಿ ಅನುಮೋದನೆ ಪಡೆದ ನಕ್ಷೆಯನ್ನು ಐಐಸಿಎಫ್ ಪ್ರತಿನಿಧಿಗಳಿಗೆ ನೀಡಲಾಗುವುದು’ ಎಂದು ಎಡಿಎನ ಹೆಚ್ಚುವರಿ ಆಯುಕ್ತ ಗೌರವ್ ದಯಾಳ್ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದ ಅಮಲಿನಲ್ಲಿ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ