Select Your Language

Notifications

webdunia
webdunia
webdunia
webdunia

82ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಗಣ್ಯರಿಂದ ಶುಭಾಶಯ

82ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಗಣ್ಯರಿಂದ ಶುಭಾಶಯ

Sampriya

ನವದೆಹಲಿ , ಭಾನುವಾರ, 21 ಜುಲೈ 2024 (12:40 IST)
Photo Courtesy X
ನವದೆಹಲಿ: ಇಂದು 82ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಶುಭ ಹಾರೈಸಿದ್ದಾರೆ.

ಖರ್ಗೆಗೆ ಶುಭಕೋರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಆಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ರಾಹುಲ್‌ ಗಾಂಧಿ ಶುಭಕೋರಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಜನರ ಒಳಿತಿಗಾಗಿ ನಿಮ್ಮ ದಣಿವರಿಯದ ಸೇವೆ ಮತ್ತು ಸಮರ್ಪಣೆ ಎಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಬರೆದುಕೊಂಡಿದ್ದಾರೆ.

ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶುಭಾಶಯ ಕೋರಿರುವ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರ ಪ್ರದೇಶದಲ್ಲಿ ಭಾರೀ ಮಳೆ: ಪ್ರತ್ಯೇಕ ಘಟನೆಗಳಲ್ಲಿ 11 ಮಂದಿ ಸಾವು