Select Your Language

Notifications

webdunia
webdunia
webdunia
webdunia

10ನೇ ಬಾರಿ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್‌ಗೆ ಮೋದಿಯಿಂದ ಶುಭಾಶಯ

Nitesh kumar

Sampriya

ಪಾಟ್ನಾ , ಗುರುವಾರ, 20 ನವೆಂಬರ್ 2025 (16:45 IST)
Photo Credit X
ಪಾಟ್ನಾ: ಪಾಟ್ನಾದ ಗಾಂಧಿ ಮೈದಾನದಲ್ಲಿ ದಾಖಲೆಯ 10 ನೇ ಬಾರಿಗೆ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ನಿತೀಶ್ ಕುಮಾರ್ ಮತ್ತು ಬಿಹಾರ ಸರ್ಕಾರಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಅವರು ನುರಿತ ಮತ್ತು ಅನುಭವಿ ಆಡಳಿತಗಾರರಾಗಿದ್ದಾರೆ, ಅವರು ರಾಜ್ಯದಲ್ಲಿ ಉತ್ತಮ ಆಡಳಿತದ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ.

ಮತ್ತೊಂದು X ಪೋಸ್ಟ್‌ನಲ್ಲಿ, ಪ್ರಧಾನಿ ಮೋದಿ ಅವರು ಹೊಸ ಉಪ ಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಅವರನ್ನು ಅಭಿನಂದಿಸಿದ್ದಾರೆ.

ಅವರ ವ್ಯಾಪಕವಾದ ಸಾರ್ವಜನಿಕ ಸೇವಾ ಅನುಭವವನ್ನು ಎತ್ತಿ ತೋರಿಸಿದ್ದಾರೆ. ಬಿಹಾರದ ಉಪ ಮುಖ್ಯಮಂತ್ರಿಗಳಾದ  ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಸಿನ್ಹಾ ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇಬ್ಬರೂ ನಾಯಕರು ತಳಮಟ್ಟದ ಸಾರ್ವಜನಿಕ ಸೇವೆಯಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದಾರೆ. ನಾನು ಅವರಿಗೆ ಶುಭ ಹಾರೈಸುತ್ತೇನೆ ಎಂದು ಬರೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ಜಿ ಪರಮೇಶ್ವರ್ ರಿಯ್ಯಾಕ್ಷನ್