Webdunia - Bharat's app for daily news and videos

Install App

ರಾಷ್ಟ್ರ ರಾಜಧಾನಿಯಲ್ಲೂ ಗೃಹಲಕ್ಷ್ಮೀ ಮಾದರಿ ಯೋಜನೆ: ಮಹಿಳೆಯರ ಖಾತೆಗೆ ಮಾಸಿಕ ₹2,500 ಜಮೆ

Sampriya
ಮಂಗಳವಾರ, 25 ಮಾರ್ಚ್ 2025 (14:14 IST)
Photo Courtesy X
ನವದೆಹಲಿ: ದೆಹಲಿ ವಿಧಾನಸಭೆಯ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಘೋಷಿಸಿದಂತೆ ಮಹಿಳೆಯರ ಖಾತೆಗೆ ಹಣ ಜಮೆ ಮಾಡುವ ಯೋಜನೆಯನ್ನು ರೇಖಾ ಗುಪ್ತಾ ಸಾರಥ್ಯದ ಸರ್ಕಾರ ಕೊನೆಗೂ ಘೋಷಣೆ ಮಾಡಿದೆ.

ಕಳೆದ ತಿಂಗಳ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ನಂತರ, 26 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಮಂಡಿಸುತ್ತಿರುವ ಮೊದಲ ಬಜೆಟ್ ಇದಾಗಿದೆ.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮಂಗಳವಾರ ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಜೆಟ್ ಮಂಡಿಸಿದ್ದಾರೆ. ಹಿಂದಿನ ವರ್ಷಕ್ಕಿಂತ ಶೇ 31.5ರಷ್ಟು ಹೆಚ್ಚಳವಾಗಿದೆ. ಹಣಕಾಸು ಖಾತೆಯನ್ನೂ ರೇಖಾ ಹೊಂದಿದ್ದಾರೆ.

ಅರ್ಹ ಮಹಿಳೆಯರಿಗೆ ಮಾಸಿಕ ₹2,500 ಹಣ ಜಮೆ ಮಾಡಲು ₹5,100 ಕೋಟಿ ಮೀಸಲಿಡಲಾಗಿದೆ. ಹೆಚ್ಚುವರಿಯಾಗಿ, ರಾಜಧಾನಿಯಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ₹2,144 ಕೋಟಿ ಹಂಚಿಕೆ ಮಾಡಲಾಗಿದೆ.

ವಿದ್ಯುತ್, ರಸ್ತೆಗಳು, ನೀರು ಮತ್ತು ಸಂಪರ್ಕ ಸೇರಿದಂತೆ ಹತ್ತು ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದೆ. ದೆಹಲಿ-ಎನ್‌ಸಿಆರ್ ಒಳಗೆ ಸುಧಾರಿತ ಸಾರಿಗೆ ಸಂಪರ್ಕಗಳಿಗಾಗಿ ದೆಹಲಿ ಸರ್ಕಾರ ₹1,000 ಕೋಟಿಯನ್ನು ನಿಗದಿಪಡಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments