Publish Date: Tue, 08 Dec 2020 (10:55 IST)
Updated Date: Tue, 08 Dec 2020 (10:56 IST)
ನವದೆಹಲಿ: ಮದುವೆ ಮಂಟಪದಲ್ಲಿದ್ದಾಗಲೇ ಮದುಮಗನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾದ ಘಟನೆ ದೆಹಲಿಯಲ್ಲಿ ನಡೆದಿದೆ.
ಗುಂಡೇಟಿನಿಂದ ಗಾಯಗೊಂಡ ವರನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಮದುವೆ ಮನೆಗೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ವರನ ಮೇಲೆ ಗುಂಡಿನ ಮಳೆಗೆರೆದು ಪರಾರಿಯಾಗಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.