ಗುಜರಾತ್: ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ

Webdunia
ಶುಕ್ರವಾರ, 4 ಆಗಸ್ಟ್ 2017 (16:46 IST)
ರಾಜ್ಯದ ಪ್ರವಾಸದಲ್ಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಿನ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಘಟನೆಯಲ್ಲಿ ರಾಹುಲ್ ಭದ್ರತಾ ಸಿಬ್ಬಂದಿಯೊಬ್ಬರಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ
 
ಉದ್ರಿಕ್ತ ಕೆಲ ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಲ್ಲಿ ರಾಹುಲ್ ಗಾಂಧಿಯವರ ಕಾರಿನ ಗಾಜು ಪುಡಿ ಪುಡಿಯಾಗಿದೆ. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಗುಜರಾತ್ ಕಾಂಗ್ರೆಸ್‌ ಶಾಸಕರಿಗೆ ಕರ್ನಾಟಕ ರಾಜ್ಯದಲ್ಲಿ ಆಶ್ರಯ ನೀಡಿರುವುದನ್ನು ವಿರೋಧಿಸಿ, ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.  
 
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಸಭೆ ಅಭ್ಯರ್ಥಿ ಅಹ್ಮದ್ ಪಟೇಲ್‌ ಸೋಲಿಸುವ ಸಂಚು ವಿಫಲವಾಗಿದ್ದರಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಬಲಿಗರು ಇಂತಹ ಹೀನ ಕೃತ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
 
ಅಹ್ಮದ್ ಪಟೇಲ್ ಅವರನ್ನು ಸೋಲಿಸಲು ಶತಾಯ ಗತಾಯ ಪ್ರಯತ್ನಿಸುತ್ತಿರುವ ಅಮಿತ್ ಶಾ, ಶಾಸಕರನ್ನು ಖರೀದಿಸುವುದು ಅಲ್ಲದೇ ಜೀವಬೆದರಿಕೆಯೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments