Select Your Language

Notifications

webdunia
webdunia
webdunia
webdunia

ಗೃಹ ಬಂಧನದಲ್ಲಿಟ್ಟು ಬಾಲಕಿಯ ಸಾಮೂಹಿಕ ಅತ್ಯಾಚಾರ

ಗೃಹ ಬಂಧನದಲ್ಲಿಟ್ಟು ಬಾಲಕಿಯ ಸಾಮೂಹಿಕ ಅತ್ಯಾಚಾರ
ನವದೆಹಲಿ , ಬುಧವಾರ, 10 ಆಗಸ್ಟ್ 2016 (17:18 IST)
ಯುವತಿಯೊಬ್ಬಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಘಟನೆ ನವದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ನಡೆದಿದೆ. ಆರೋಪಿಗಳಿಬ್ಬರು ಪೀಡಿತೆಗೆ ಪರಿಚಯಸ್ಥರೇ ಆಗಿದ್ದು ಎರಡು ದಿನಗಳ ಕಾಲ ಆಕೆಯನ್ನು ಗೃಹ ಬಂಧನದಲ್ಲಿಟ್ಟು ಅತ್ಯಾಚಾರ ನಡೆಸಿದ್ದಾರೆ.

ಬಾದ್ಶಹಾಪುರದಲ್ಲಿ ಈ ಘಟನೆ ನಡೆದಿದ್ದು 10 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋದ ಕರಣ್ ಸಿಂಗ್ ಎಂಬಾತ ಆಕೆಯನ್ನು ಕೋಣೆಯೊಂದರಲ್ಲಿ ಕೂಡಿ ಹಾಕಿ ತನ್ನ ಸ್ನೇಹಿತ ಸಂಜಯ್ ಎಂಬಾತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದಾನೆ.
 
ಎರಡು ದಿನಗಳ ಬಳಿಕ ಆಕೆಯನ್ನು ಗುರ್ಗಾಂವ ಕಡೆ ಹೋಗುವ ಬಸ್ ಹತ್ತಿಸಿ ಕಳುಹಿಸಲಾಯಿತು. 
 
ಮನೆಗೆ ಹಿಂತಿರುಗಿದ ಬಾಲಕಿ ತನ್ನ ಪೋಷಕರ ಬಳಿ ನಡೆದ ವಿಷಯವನ್ನೆಲ್ಲ ಹೇಳಿದ್ದಾಳೆ.
 
ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 
ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಸಿ.ಶಿಖಾ ಎತ್ತಂಗಡಿ!