Publish Date: Mon, 20 Nov 2017 (09:56 IST)
Updated Date: Mon, 20 Nov 2017 (09:58 IST)
ಅಹಮ್ಮದಾಬಾದ್: ಬಿಜೆಪಿ ವಿರುದ್ಧ ಪ್ರತಿತಂತ್ರ ಹೆಣೆಯಲು ಕಾಂಗ್ರೆಸ್ ಜತೆ ಕೈ ಜೋಡಿಸಿದ್ದ ಪಟೇಲ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್ ಈಗ ಕಾಂಗ್ರೆಸ್ ವಿರುದ್ಧವೇ ಸಿಟ್ಟಿಗೆದ್ದಿದ್ದಾರೆ.
ಗುಜರಾತ್ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ನಿನ್ನ 77 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೇ ಹಾರ್ದಿಕ್ ಅಸಮಾಧಾನ ಸ್ಪೋಟಗೊಂಡಿತ್ತು.
ಈ ಹಿನ್ನಲೆಯಲ್ಲಿ ಇಂದು ನಡೆಸಲುದ್ದೇಶಿಸಿದ್ದ ಚುನಾವಣಾ ರ್ಯಾಲಿಯನ್ನು ಹಾರ್ದಿಕ್ ಕೈ ಬಿಟ್ಟಿದ್ದಾರೆ. ಅಭ್ಯರ್ಥಿಗಳ ಪಟ್ಟಿ ವಿಚಾರಕ್ಕೆ ಹಾರ್ದಿಕ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ