Daily Horoscope

Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ ಹಾರ್ದಿಕ್ ಪಟೇಲ್?

ಚುನಾವಣೆ
ಗಾಂಧೀನಗರ : ಗುಜರಾತ್ ಕಾಂಗ್ರೆಸ್ನ ಮಾಜಿ ಕಾರ್ಯಾಧ್ಯಕ್ಷ ಮತ್ತು ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಜೂನ್ 2ರಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಲಿದ್ದಾರೆ.

ಪಶ್ಚಿಮ ರಾಜ್ಯದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ಬಿಜೆಪಿ ಸೇರುತ್ತಿರುವ ಹಾರ್ದಿಕ್ ಪಟೇಲ್ ಅವರ ನಿರ್ಧಾರವು ಗುಜರಾತ್ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿಯೇ ಮಹತ್ವ ಪಡೆದುಕೊಂಡಿದೆ.

ಕೆಲವು ದಿನಗಳಿಂದ ಹಾರ್ದಿಕ್ ಪಟೇಲ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿತ್ತು. ಆದರೆ ಈ ಊಹಾಪೋಹಗಳನ್ನು ನಿರಾಕರಿಸಿ,

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಬಗ್ಗೆ ಆಮ್ ಆದ್ಮಿ ಪಕ್ಷದ ವಿರುದ್ಧ ಕಿಡಿಕಾರಿದ್ದರು. ನಾನು ಬಿಜೆಪಿ ಸೇರುವುದಿಲ್ಲ. ಒಂದು ವೇಳೆ ಸೇರಿದರೆ ನಿಮಗೆ ತಿಳಿಸುತ್ತೇನೆ ಎಂದು ಭಾನುವಾರ ಹೇಳಿದ್ದರು. 

ಇದೀಗ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ಹಾರ್ದಿಕ್ ಪಟೇಲ್ ಅವರು, ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಗೆಳೆಯನ ಮೇಲೆಯೇ ಆ್ಯಸಿಡ್ ದಾಳಿ!