Election results: ಎರಡು ರಾಜ್ಯಗಳಲ್ಲಿ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್

Krishnaveni K
ಮಂಗಳವಾರ, 8 ಅಕ್ಟೋಬರ್ 2024 (08:32 IST)
ನವದೆಹಲಿ: ಹರ್ಯಾಣ ಮತ್ತು ಜಮ್ಮು-ಕಾಶ್ಮೀರದಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಎಕ್ಸಿಟ್ ಪೋಲ್ ಪ್ರಕಾರ ಎರಡೂ ಕಡೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಬರುವುದು ಬಹುತೇಕ ಖಚಿತವಾಗಿದೆ.

ಹರ್ಯಾಣದಲ್ಲಿ ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತ ಪಡೆಯಲಿದೆ ಎನ್ನುವ ವಿಶ್ವಾಸದಲ್ಲಿ ನಾಯಕರಿದ್ದಾರೆ. ಈ ಬಾರಿ ರಾಹುಲ್ ಗಾಂಧಿ ನಡೆಸಿದ ಭಾರತ್ ಝೋಡೋ ಮಾದರಿ ಯಾತ್ರೆ ಇಲ್ಲಿ ಫಲ ಕೊಡಬಹುದು ಎಂಬ ವಿಶ್ವಾಸ ಕಾಂಗ್ರೆಸ್ ನದ್ದಾಗಿದೆ. ಚುನಾವಣಾ ಪ್ರಚಾರದ ವೇಳೆಯೂ ಪಕ್ಷಕ್ಕೆ ಬೆಂಬಲ ಸಿಕ್ಕಿತ್ತು.

ಜಮ್ಮು ಕಾಶ್ಮೀರದಲ್ಲಿ ಒಟ್ಟು 90 ಕ್ಷೇತ್ರಗಳಲ್ಲಿ 873 ಸ್ಪರ್ಧಿಗಳು ಕಣಕ್ಕಿಳಿದಿದ್ದರು. ಈ ಬಾರಿ ಶೇ.63.45 ರಷ್ಟು ಮತದಾನವಾಗಿದ್ದು ವಿಶೇಷ. ಈ ಬಾರಿ ಇಲ್ಲಿ ಅತಂತ್ರ ಪರಿಸ್ಥಿತಿ ಬರುವ ಸಾಧ್ಯತೆಯಿರುವುದರಿಂದ ಬಿಜೆಪಿ ಈಗಾಗಲೇ ಪಕ್ಷೇತರರೊಂದಿಗೆ ಮಾತುಕತೆ ಶುರು ಮಾಡಿದೆ. ಇನ್ನು ಹರ್ಯಾಣದಲ್ಲಿ 90 ಕ್ಷೇತ್ರಗಳಲ್ಲಿ ಮತದಾನವಾಗಿದೆ. ಕಳೆದ 10 ವರ್ಷಗಳಿಂದ ಇಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಈ ಬಾರಿ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆಯಿದೆ.

ಇನ್ನು, ಜಮ್ಮು ಕಾಶ್ಮೀರದಲ್ಲಿ ಈ ಬಾರಿ ಅತಂತ್ರ ಸ್ಥಿತಿಯಾದರೂ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನೆರವಿನಿಂದ ಕಾಂಗ್ರೆಸ್ ಅಧಿಕಾರಕ್ಕೇರಬಹುದಾಗಿದೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿತ್ತು. ಹೀಗಾಗಿ ಇಲ್ಲಿಯೂ ಈ ಬಾರಿ ತಮ್ಮದೇ ಸರ್ಕಾರ ಬರಬಹುದು ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ಇನ್ನು ಕೆಲವೇ ಹೊತ್ತಿನಲ್ಲಿ ಫಲಿತಾಂಶ ತಿಳಿದುಬರಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments