ಶ್ರೀನಗರ : ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ಗುಂಡಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತ ಬಲಿಯಾದ ಬಳಿಕ,
ಜಮ್ಮು ಮತ್ತು ಕಾಶ್ಮೀರದಲ್ಲಿ ಪಂಡಿತರಿಗೆ ಭದ್ರತೆ ಕಲ್ಪಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಕಾಶ್ಮೀರದಲ್ಲಿ ಪಂಡಿತರ ಹತ್ಯೆ ನಿಲ್ಲುತ್ತಿಲ್ಲ. ಅವರಿಗೆ ಭದ್ರತೆ ನೀಡುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದು ನಾಚಿಗೇಡಿನ ಸಂಗತಿ ಎಂದು ಕಿಡಿಕಾರಿದೆ.