Publish Date: Mon, 22 May 2017 (12:36 IST)
Updated Date: Mon, 22 May 2017 (12:39 IST)
ಜಾರ್ಖಂಡ್‌ನ ಹಜರಿಬಾಗ್ ರೈಲ್ವೆ ನಿಲ್ದಾಣದಲ್ಲಿ ಅವಳಿ ಸ್ಫೋಟ ಸಂಭವಿಸಿದ್ದು, ಬಾಲಕನೊಬ್ಬನ ಕೈ ಸುಟ್ಟುಹೋಗಿರುವ ಘಟನೆ ನಡೆದಿದೆ.
ರೈಲ್ವೆ ನಿಲ್ದಾಣದಲ್ಲಿ ಜನಜಂಗುಳಿ ಮಧ್ಯೆ ಎರಡು ಸ್ಫೋಟಗಳು ಸಂಭವಿಸಿವೆ. ಸ್ಫೋಟದ ರಭಸಕ್ಕೆ ಜನರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಈ ಸ್ಫೋಟದಲ್ಲಿ ಓರ್ವ ಬಾಲಕ ತನ್ನ ಬಲಗೈ ಕಳೆದುಕೊಂಡಿದ್ದು, ಧನ್ಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.
ಸ್ಫೋಟಕ್ಕೆ ಕಾರಣವಾದ ವಸ್ತುವನ್ನು ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್‌ನಲ್ಲಿ ಸುತ್ತಿ ಎಸೆಯಲಾಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.