Publish Date: Tue, 12 Feb 2019 (07:05 IST)
Updated Date: Tue, 12 Feb 2019 (07:08 IST)
ನವದೆಹಲಿ : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಇನ್ನು ಮುಂದೆ ಸಂಸದೀಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳುವುದರ ಮೂಲಕ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು,’ ಇನ್ನುಮುಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಆದರೆ ಯುವಕರನ್ನು ತಯಾರು ಮಾಡುತ್ತೇನೆ’ ಎಂದು ಹೇಳಿದ್ದಾರೆ. ಇದೇ ವೇಳೆ ಅವರು, ‘ಕರ್ನಾಟಕದಲ್ಲಿ ಇರುವ ಮೈತ್ರಿ ಸರ್ಕಾರವನ್ನು ಬೀಳಿಸಿ ನೋಡೋಣ’ ಎಂದು ಬಿಜೆಪಿಗೆ ಸವಾಲೆಸೆದಿದ್ದಾರೆ.
ಹಾಗೇ ‘ನಮ್ಮ ಮಗ ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಕೂಡಲೇ ಬಳ್ಳಾರಿ ಮೈನಿಂಗ್ ದಂಧೆಯನ್ನು ನಿಲ್ಲಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.