Publish Date: Mon, 12 Oct 2020 (22:26 IST)
Updated Date: Mon, 12 Oct 2020 (22:28 IST)
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಜೆಡಿಎಸ್ ರಾಜ್ಯ ಘಟಕವನ್ನು ವಿಸರ್ಜನೆ ಮಾಡಿದ್ದಾರೆ.
ಕೇರಳ ರಾಜ್ಯದ ಜೆಡಿಎಸ್ ಘಟಕವನ್ನು ವಿಸರ್ಜನೆ ಮಾಡಿರುವುದಾಗಿ ರಾಜ್ಯಸಭಾ ಸದಸ್ಯರೂ ಆಗಿರುವ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಶಾಸಕ ಸಿ.ಕೆ. ನಾನು ನೇತೃತ್ವದಲ್ಲಿ ಜೆಡಿಎಸ್ ಕೇರಳದಲ್ಲಿತ್ತು. ಪಕ್ಷ ವಿರೋಧಿ ಕೆಲಸ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ವಿಸರ್ಜನೆ ಮಾಡಲಾಗಿದೆ.
ಇನ್ನು, ಕೇರಳ ಘಟಕಕ್ಕೆ ಹಂಗಾಮಿ ಅಧ್ಯಕ್ಷರನ್ನಾಗಿ ಮ್ಯಾಥ್ಯೂ ಥಾಮಸ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.