Webdunia - Bharat's app for daily news and videos

Install App

ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಎಚ್ ಡಿ ಕುಮಾರಸ್ವಾಮಿ

Krishnaveni K
ಸೋಮವಾರ, 24 ಜೂನ್ 2024 (13:58 IST)
ನವದೆಹಲಿ: ಮೋದಿ 3.0 ಸರ್ಕಾರದ ನೂತನ ಲೋಕಸಭೆ ಕಲಾಪದಲ್ಲಿ ಇಂದು ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದೆ. ಈ ವೇಳೆ ಮಂಡ್ಯದಿಂದ ಆಯ್ಕೆಯಾದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕೂಡಾ ನೂತನ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಲೋಕಸಭೆಯಲ್ಲಿ ಇಂದು ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಿರುವ ಭ್ರಾರ್ತೃಹರಿ ಅಧ್ಯಕ್ಷತೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದೆ. ಅದರಂತೆ ಮಡ್ಯ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾದ ಎಚ್ ಡಿ ಕುಮಾರಸ್ವಾಮಿ ಕೂಡಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ತಮ್ಮ ಹೆಸರು ಕೂಗುತ್ತಿದ್ದಂತೇ ಪ್ರಧಾನಿ ಮೋದಿ, ನಿತಿನ್ ಗಡ್ಕರಿ, ಅಮಿತ್ ಶಾ ಅವರಿಗೆ ಕೈ ಮುಗಿದು ಸ್ಪೀಕರ್ ಪೀಠದತ್ತ ನಡೆದ ಕುಮಾರಸ್ವಾಮಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು. ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ ಎಂಬವನಾದ ನಾನು ಎಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.

ಈ ಬಾರಿ ಮೋದಿ ಸಂಪುಟದಲ್ಲಿ ಕುಮಾರಸ್ವಾಮಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ನೇಮಕಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿರುವ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿಯೂ ಅಧಿಕಾರಕ್ಕೇರಿರುವುದು  ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮೋದಿ ದೊಡ್ಡ ಪ್ರಾಬ್ಲಂ ಅಲ್ಲ, ಅವರನ್ನು ನಾನು ಎರಡು ಸಲ ಮೀಟ್ ಮಾಡಿದ್ದೇನೆ: ರಾಹುಲ್ ಗಾಂಧಿ

ಶಿವನ ಹಾಡು ಹಾಡುವ ಈ ಮಗುವಿನ ವಿಡಿಯೋ ನೋಡಿದ್ರೆ ನಗು ಬರುತ್ತೆ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಮುಂದಿನ ಸುದ್ದಿ
Show comments