Publish Date: Thu, 26 Oct 2023 (14:00 IST)
Updated Date: Thu, 26 Oct 2023 (12:21 IST)
ಮಿಜೋರಾಂ ರಾಜ್ಯದ ಮುಖ್ಯಮಂತ್ರಿ ಝೋರಂಥಂಗಾ ಅವರು ಪ್ರಧಾನಿ ನರೇಂದ್ರ ಮೋದಿ ಜೊತೆ ಜಂಟಿಯಾಗಿ ಪ್ರಚಾರದ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಸಡ್ಡು ಹೊಡೆದಿದ್ದಾರೆ.ಮಾದ್ಯಮ ಸಂದರ್ಶನದಲ್ಲಿ ಮಾತನಾಡಿದ ಅವರು ಮಣಿಪುರ ವಿಚಾರದಲ್ಲಿ ಬಿಜೆಪಿ ಕ್ರಿಶ್ಚಿಯನ್ ವಿರೋಧಿ ನಿಲುವು ತೆಗೆದುಕೊಂಡಿದೆ.
ನಮ್ಮ ರಾಜ್ಯದಲ್ಲಿ ಕ್ರಿಶ್ಚಿಯನ್ ಸಮುದಾಯ ಬಹುಸಂಖ್ಯಾತರಾಗಿರುವುದರಿಂದ ಬಿಜೆಪಿಯನ್ನು ಬೆಂಬಲಿಸಿದರೆ ತಮ್ಮ ಪಕ್ಷ ಮಿಜೋ ನ್ಯಾಷನಲ್ ಫ್ರಂಟ್‌ಗೆ ಹಿನ್ನಡೆಯಾಗುವ ಸಂಭವವಿದೆ. ಹೀಗಾಗಿ ಕೇಂದ್ರದಲ್ಲಿ ಮಾತ್ರ ನಮ್ಮ ಪಕ್ಷ ಎನ್‌ಡಿಎ ಮೈತ್ರಿಕೂಟದಲ್ಲಿರಲಿದೆ. ರಾಜ್ಯದಲ್ಲಿ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.