Publish Date: Wed, 31 Aug 2022 (11:21 IST)
Updated Date: Wed, 31 Aug 2022 (09:59 IST)
ರಾಯಪುರ : ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ಸ್ವತಃ ಪೋಷಕರೇ 12 ವರ್ಷದ ಮಗಳನ್ನು ಕೊಂದು ಮೃತದೇಹವನ್ನು ಕಾಡಿನಲ್ಲಿ ಎಸೆದಿದ್ದ ಘಟನೆ ಛತ್ತಿಸ್ಗಢದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ತಂದೆ ವಿಶ್ವನಾಥ್ ಎಕ್ಕಾ ಮತ್ತು ಅವರ ಪತ್ನಿ ದಿಲ್ಸಾ ಎಕ್ಕಾ ಇಬ್ಬರನ್ನು ಬಂಧಿಸಲಾಗಿದೆ.
ಈ ವರ್ಷ ಜೂನ್ ನಲ್ಲಿ ಘಟನೆ ನಡೆದಿತ್ತು. ಕೃತ್ಯ ಎಸಗಿದ್ದ ಪೋಷಕರು ತನಿಖೆಯ ದಾರಿ ತಪ್ಪಿಸುವ ಉದ್ದೇಶದಿಂದ ಮಗಳನ್ನು ತಾವೇ ಕೊಂದು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.