ಮದುವೆಯಾಗುವಂತೆ ಕೇಳಿದ್ದಕ್ಕೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯನ್ನ ಕೊಂದೇಬಿಟ್ಟ !

Webdunia
ಶನಿವಾರ, 22 ಏಪ್ರಿಲ್ 2023 (10:41 IST)
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ 25ರ ಮಹಿಳೆಯನ್ನ ಕತ್ತು ಹಿಸುಕಿ ಕೊಲೆಗೈದು, ಆಕೆಯ ಮೃತದೇಹವನ್ನು ಮನೆಯಿಂದ 12 ಕಿಮೀ ದೂರದಲ್ಲಿ ಎಸೆದಿರುವ ಘಟನೆ ಈಶಾನ್ಯ ದೆಹಲಿಯಲ್ಲಿ ನಡೆದಿದೆ.
 
ಇದೇ ಏಪ್ರಿಲ್ 12ರ ತಡರಾತ್ರಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿರಲಿಲ್ಲ, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದುಬಂದಿದೆ ಎಂದು ಉಪಪೊಲೀಸ್ ಆಯುಕ್ತ ಜಾರ್ಜ್ ಟರ್ಕಿ ತಿಳಿಸಿದ್ದಾರೆ. 

ರೋಹಿತಾ (25) ಎಂಬ ಮಹಿಳೆ, ವಿನೀತ್ ಎಂಬವನ ಜೊತೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿ ವಾಸಿಸುತ್ತಿದ್ದಳು. ಕಳೆದ 4 ವರ್ಷಗಳ ಹಿಂದೆ ಇವರಿಬ್ಬರು ಮನೆ ಬಿಟ್ಟು ಓಡಿಹೋಗಿದ್ದರು. ನಂತರ ರೋಹಿತಾ, ವಿನೀತ್ಗೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು. ಇದೇ ವಿಷಯಕ್ಕಾಗಿ ಇವರಿಬ್ಬರ ನಡುವೆ ಜಗಳ ನಡೆದಿತ್ತು.

ಏಪ್ರಿಲ್ 12 ರಂದು ಸಹ ಜಗಳವಾಡಿದ್ದರು, ಈ ವೇಳೆ ಮಾತಿಗೆ ಮಾತು ಬೆಳೆದು, ವಿನೀತ್, ರೋಹಿತಾಳನ್ನ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ನಂತರ ತನ್ನ ಸ್ನೇಹಿತನ ಸಹಾಯದಿಂದ ಶವ ಎಸೆದು ಬಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments