Select Your Language

Notifications

webdunia
webdunia
webdunia
webdunia

ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ !

ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ !
ನವದೆಹಲಿ , ಶುಕ್ರವಾರ, 20 ಮೇ 2022 (07:23 IST)
ನವದೆಹಲಿ : ದೆಹಲಿಯ ಕಾರ್ಖಾನೆಯೊಂದರಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ.

ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳು ಧಾವಿಸಿವೆ ಎಂದು ಅಗ್ನಿಶಾಮಕ ಸೇವಾ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ. 

ಬೆಂಕಿ ಹೊತ್ತಿಕೊಳ್ಳು ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ 7 ಮಂದಿಗೆ ಗಾಯಗಳಾಗಿದ್ದು, ಅವರನ್ನು ನಗರದ ಜಿಟಿಬಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ 7 ಜನರ ಪೈಕಿ ಒಬ್ಬ ಸಾವನ್ನಪ್ಪಿದ್ದಾನೆ. ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. 

ಕೆಲವೇ ದಿನಗಳ ಹಿಂದೆ ದೆಹಲಿಯ ಮುಂಡ್ಕಾದಲ್ಲಿ 4 ಅಂತಸ್ತಿನ ಕಟ್ಟಡದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ಆ ಘಟನೆಯಲ್ಲಿ 27 ಜನರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಉಕ್ರೇನ್ಗೆ ಸಹಾಯ ಮಾಡಿದ ಪಾಕಿಸ್ತಾನದ ಶ್ರೀಮಂತ