Publish Date: Thu, 21 Oct 2021 (09:03 IST)
Updated Date: Thu, 21 Oct 2021 (09:07 IST)
ಬೆಂಗಳೂರು, ಅ. 21 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಲ್ಲಿ ಪ್ರವಾಹ ಮತ್ತು ಭೂಕುಸಿತ ದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.