Webdunia - Bharat's app for daily news and videos

Install App

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Sampriya
ಸೋಮವಾರ, 18 ಆಗಸ್ಟ್ 2025 (14:19 IST)
Photo Credit X
ಮುಂಬೈ: ಮಹಾರಾಷ್ಟ್ರ ರಾಜ್ಯದಾದ್ಯಂತ ಮಹಾಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಬೆನ್ನಲ್ಲೇ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.

ಈ ಮಧ್ಯೆ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. 

ಹಲವು ವಿಮಾನಗಳ ಸಂಚಾರದಲ್ಲೂ ವ್ಯತ್ಯಯವಾಗಿದೆ. ಮುಂಬೈನ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ನಡೆಸುವ ಮುನ್ನ ಒಂಬತ್ತು ವಿಮಾನಗಳು ಹಲವು ಸುತ್ತುಗಳನ್ನು ಹಾಕಿ ನಂತರ ಪ್ರಯಾಸದಿಂದ ಇಳಿದಿವೆ. ಒಂದು ವಿಮಾನವನ್ನು ಸೂರತ್‌ಗೆ ಮಾರ್ಗ ಬದಲಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದು ಹಲವು ರಸ್ತೆಗಳು ಜಲಾವೃತಗೊಂಡಿವೆ. ತಗ್ಗಿನ ಪ್ರದೇಶಗಳಿಗೆ ನೀರು ನುಗ್ಗಿದೆ.

ಮಂಗಳವಾರ ಮುಂಬೈ ಸುತ್ತಮುತ್ತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇದರೊಂದಿಗೆ ರತ್ನಗಿರಿ ಜಿಲ್ಲೆ, ಸಿಂಧುದುರ್ಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವಿಪತ್ತು ನಿರ್ವಹಣೆಗೆ 1916 ಸಹಾಯವಾಣಿಗೆ ಕರೆ ಮಾಡಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೋಮವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 5.4 ಸೆಂ.ಮೀ. ಮಳೆಯಾಗಿದೆ. ಪೂರ್ವ ಭಾಗದಲ್ಲಿ 7.2 ಸೆಂ.ಮೀ., ಪಶ್ಚಿಮದಲ್ಲಿ 6.5 ಸೆಂ.ಮೀ. ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments