Publish Date: Sun, 07 Aug 2022 (11:17 IST)
Updated Date: Sun, 07 Aug 2022 (11:39 IST)
ಲಕ್ನೋ : ಮಹಿಳೆಯ ಮೇಲೆ ನಾಲ್ವರು ಅತ್ಯಾಚಾರ ಮಾಡಿ, ಅದನ್ನು ವೀಡಿಯೋ ಮಾಡಿರುವ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ.
ಮಹಿಳೆಯೊಬ್ಬಳು ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ತುಂಬಲು ಸಾರ್ವಜನಿಕ ಸೇವಾ ಕೇಂದ್ರಕ್ಕೆ ಹೋಗುತ್ತಿದ್ದಾಗ ಕೇಂದ್ರದ ನಿರ್ವಾಹಕರು, ಕಂಪ್ಯೂಟರ್ ಆಪರೇಟರ್, ಅಂಗಡಿ ಮಾಲೀಕರು ಹಾಗೂ ಮತ್ತೊಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರ ಮಾಡಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವೀಡಿಯೋವನ್ನು ಮಾಡಿಕೊಂಡಿದ್ದು, ಆರೋಪಿಗಳಲ್ಲಿ ಒಬ್ಬಾತ ಆ ವೀಡಿಯೋವನ್ನು ಆಕೆಯ ಅತ್ತೆಗೆ ಕಳುಹಿಸಿದ್ದಾನೆ. ಆಗ ಈ ವಿಷಯ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆ ಸಂಬಂಧಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ನಾಲ್ವರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.