Select Your Language

Notifications

webdunia
webdunia
webdunia
webdunia

ಕನಸಿನ ಕನ್ಯೆಗೆ ಅಪಘಾತ: ಆಸ್ಪತ್ರೆಗೆ ದಾಖಲು

ಕನಸಿನ ಕನ್ಯೆಗೆ ಅಪಘಾತ: ಆಸ್ಪತ್ರೆಗೆ ದಾಖಲು
ದೌಸಾ , ಶುಕ್ರವಾರ, 3 ಜುಲೈ 2015 (09:07 IST)
ಕನಸಿನ ಕನ್ಯೆ ಎಂದೇ ಪ್ರಖ್ಯಾತರಾದ ನಟಿ, ಬಿಜೆಪಿ ಸಂಸದೆ ಹೇಮಾಮಾಲಿನಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅಲ್ಲದೇ ಘಟನೆಯಲ್ಲಿ ಬಾಲಕಿಯೊಬ್ಬಳು ಮೃತ ಪಟ್ಟಿದ್ದಾಳೆ.

ನಟಿ ಹೇಮಾಮಾನಿಲಿ ಮಥುರಾದಿಂದ ಜೈಪುರಕ್ಕೆ ತೆರಳುತ್ತಿದ್ದಾಗ ರಾಜಸ್ಥಾನದ ದೌಸಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಈ ದುರ್ಘಟನೆ ನಡೆದಿತ್ತು. ನಟಿಯನ್ನು ಜೈಪುರದ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಲ್ಟೋ ಕಾರಿನಲ್ಲಿದ್ದ 5 ವರ್ಷದ ಬಾಲಕಿ ಸೋನಂ ಮೃತಪಟ್ಟಿದ್ದು ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
 
ಹೇಮಾಮಾಲಿನಿ ಅವರು ಪ್ರಯಾಣಿಸುತ್ತಿದ್ದ ಮರ್ಸಿಡೆಸ್ ಬೆಂಜ್ ಕಾರು ಅದೇ ಮಾರ್ಗದಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಹೇಮಾಮಾಲಿನಿ ಅವರ ಕಾರಿನ ಚಾಲಕನ ಅತಿ ವೇಗದ ಚಾಲನೆಯೇ ಘಟನೆ ಕಾರಣ ಎನ್ನಲಾಗುತ್ತಿದೆ . ಮಥುರಾ ಸಂಸದೆ ಹೇಮಾಮಾಲಿನಿ ಅವರ ಹಣೆಗೆ ಹೆಚ್ಚಿನ ಪೆಟ್ಟು ಬಿದ್ದಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು  ಪೊಲೀಸರು ತಿಳಿಸಿದ್ದಾರೆ.
 
ಘಟನೆಗೆ ಸಂಬಂಧಿಸಿದಂತೆ ಹೇಮಾಮಾಲಿನಿ ಕಾರಿನ ಚಾಲಕ ಮಹೇಶ ಠಾಕೂರ್‌ನನ್ನು ಬಂಧಿಸಿರುವ ರಾಜಸ್ಥಾನ ಪೊಲೀಸರು ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ. 

Share this Story:

Follow Webdunia kannada