Webdunia - Bharat's app for daily news and videos

Install App

ಮೆದುಳು ರಕ್ತಸ್ರಾವ: ಇಹಲೋಕ ತ್ಯಜಿಸಿದ ಹೇಮಂತ್ ಕರ್ಕರೆ ಪತ್ನಿ ಕವಿತಾ ಕರ್ಕರೆ

Webdunia
ಸೋಮವಾರ, 29 ಸೆಪ್ಟಂಬರ್ 2014 (16:20 IST)
ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದ ಮಾಜಿ ಮುಖ್ಯಸ್ಥರಾಗಿದ್ದ ದಿವಂಗತ ಹೇಮಂತ್ ಕರ್ಕರೆಯವರ ಪತ್ನಿ ಕವಿತಾ ಕರ್ಕರೆ ಮೆದುಳು ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
 
ನಗರದ ಮಾಹಿಮ್ ಪ್ರದೇಶದಲ್ಲಿರುವ ಹಿಂದುಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಮೆದಳು ಕಾರ್ಯನಿರ್ವಹಣೆ ಸ್ಥಗಿತಗೊಂಡಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 
 
ಮೃತ ಕವಿತಾ ಕರ್ಕರೆಯವರಿಗೆ ಒಬ್ಬ ಪುತ್ರ ಮತ್ತು ಇಬ್ಬರು ಪುತ್ರಿಯರಿದ್ದಾರೆ. ತಾಯಿಯ ಅಂಗಾಂಗಗಳನ್ನು ದಾನ ಮಾಡುವಂತೆ ಮಕ್ಕಳು ಸಮ್ಮತಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಶನಿವಾರದಂದು ಕವಿತಾ ಕರ್ಕರೆಯವರನ್ನು ಮೆದುಳು ರಕ್ತಸ್ರಾವ ಹೆಚ್ಚಾಗಿದ್ದರಿಂದ ಹಿಂದುಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಪರಿಸ್ಥಿತಿ ತೀರಾ ಗಂಭೀರವಾಗಿದ್ದರಿಂದ ಕೋಮಾಗೆ ಜಾರಿದ್ದರು. ಚಿಕಿತ್ಲೆ ಮುಂದುವರಿದಿತ್ತು. ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಕಳೆದ 2008ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹೇಮಂತ್ ಕರ್ಕರೆ ಭಯೋತ್ಪಾದಕರೊಂದಿಗೆ ಹೋರಾಡುವಾಗ ಹುತಾತ್ಮರಾಗಿದ್ದರು. ಘಟನೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಶೋಕ್ ಕಾಮ್ಟೆ ಮತ್ತು ಹಿರಿಯ ಪೊಲೀಸ್ ಅಧಿಕಾರಿ ವಿಜಯ್ ಸಾಲಸ್ಕರ್ ಕೂಡಾ ಉಗ್ರರ ಗುಂಡಿಗೆ ಬಲಿಯಾಗಿದ್ದರು.
 
 
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments