Select Your Language

Notifications

webdunia
webdunia
webdunia
webdunia

5 ತಿಂಗಳ ಜೈಲುವಾಸ ಬಳಿಕ ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣವಚನ

5 ತಿಂಗಳ ಜೈಲುವಾಸ ಬಳಿಕ ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣವಚನ

Sampriya

ಹೊಸದಿಲ್ಲಿ , ಗುರುವಾರ, 4 ಜುಲೈ 2024 (17:54 IST)
Photo Courtesy X
ಹೊಸದಿಲ್ಲಿ: ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾದ ನಂತರ ಜುಲೈ 7 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಘೋಷಿಸಲಾಯಿತು, ಅವರು ಇದ್ದಕ್ಕಿದ್ದಂತೆ ಅದನ್ನು ಇಂದಿಗೆ ಮರು ನಿಗದಿಪಡಿಸಿದರು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಪ್ರಮಾಣವನ ಬೋಧಿಸಿದರು. ಈ ಮೂಲಕ ಹೇಮಂತ್ ಅವರು ಮೂರನೇ ಬಾರಿಗೆ ಜಾರ್ಖಂಡ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್, ಆರ್‌ಜೆಡಿ ನಾಯಕರು ಸೇರಿದಂತೆ ಹಲವು ಪಕ್ಷದ ಮುಖಂಡರು ಭಾಗಿಯಾಗಿದ್ದರು.

ಜನವರಿ 31 ರಂದು ಜಾರಿ ನಿರ್ದೇಶನಾಲಯದಿಂದ ಹೇಮಂತ್ ಅವರನ್ನು ಬಂಧಿಸಿದ ನಂತರ ಜಾರ್ಖಂಡ್‌ನ 12 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂಪೈ ಸೊರೆನ್ ಅವರ ರಾಜೀನಾಮೆಯ ನಂತರ ಸೊರೆನ್ ಬುಧವಾರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರ ಮುಂದೆ ಹಕ್ಕು ಮಂಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಹತ್ರಾಸ್ ಕಾಲ್ತುಳಿತ: 6 ಮಂದಿ ವಶಕ್ಕೆ, ಪ್ರಮುಖ ಆರೋಪಿ ಸುಳಿವು ಕೊಟ್ಟವರಿಗೆ ಬಹುಮಾನ