ಹಿಮಾಚಲ ಪ್ರದೇಶ: ರಾಂಪುರದ ಸಮೇಜ್‌ನಲ್ಲಿ ಗುರುವಾರ ಸಂಭವಿಸಿದ ಮೇಘಸ್ಫೋಟದಿಂದ ಇನ್ನೂ 36 ಮಂದಿ ನಾಪತ್ತೆಯಾಗಿದ್ದು, ಶೋಧ ಕಾರ್ಯಚರಣೆ ಮುಂದುವರೆದಿದೆ.
ಹಾನಿಗೊಳಗಾದ ಪ್ರದೇಶಗಳಲ್ಲಿ ಭಾರತೀಯ ಸೇನೆಯು ರಕ್ಷಣಾ ಕಾರ್ಯ ಮತ್ತು ಶೋಧ ಕಾರ್ಯವನ್ನು ಮುಂದುವರೆಸಿದೆ. ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಕಡಿತಗೊಂಡ ಪ್ರದೇಶಗಳ ನಡುವೆ ಸಂಪರ್ಕವನ್ನು ಸ್ಥಾಪಿಸಲು ಸೇನೆಯು ತಾತ್ಕಾಲಿಕ ಸೇತುವೆಗಳನ್ನು ಸ್ಥಾಪಿಸಿದೆ.
ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಗೃಹರಕ್ಷಕ ದಳ ಮತ್ತು ಸಿಐಎಸ್‌ಎಫ್ ತಂಡಗಳು ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ.
ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು ಮಾತನಾಡಿದ ಈ ಮಹಾಸ್ಫೋಟದಲ್ಲಿ ಸುಮಾರು 50 ಜನರು ಸಾವನ್ನಪ್ಪಿರುವ ಶಂಕೆ ಇದೆ ಮತ್ತು ಅಧಿಕೃತ ದೃಢೀಕರಣ ಮತ್ತು ರಕ್ಷಣಾ ಕಾರ್ಯಾಚರಣೆಗಳು ಪೂರ್ಣಗೊಂಡ ನಂತರವೇ ಅಧಿಕೃತ ಸಂಖ್ಯೆಯನ್ನು ಘೋಷಿಸಬಹುದು ಎಂದು ಹೇಳಿದ್ದಾರೆ.
ಮೃತದೇಹಗಳನ್ನು ಹಿಂಪಡೆಯುವುದು ಮತ್ತು ರಾಜ್ಯದ ಪೀಡಿತ ಪ್ರದೇಶಗಳಲ್ಲಿ ಸಾಧ್ಯವಾದಷ್ಟು ಬೇಗ ಸಂಪರ್ಕವನ್ನು ಪುನಃಸ್ಥಾಪಿಸುವುದು ರಾಜ್ಯ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಿಂಗ್ ಹೇಳಿದರು.