Publish Date: Fri, 30 Aug 2024 (14:34 IST)
Updated Date: Fri, 30 Aug 2024 (14:36 IST)
ಅಮರಾವತಿ: ಆಂಧ್ರಪ್ರದೇಶದ ಎಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಪತ್ತೆಯಾಗಿದೆ. ಇದಕ್ಕೆ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃಷ್ಣಾ ಜಿಲ್ಲೆಯ ಗುಡ್ಲವಲ್ಲೇರು ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.
ಹಾಸ್ಟೆಲ್‌ನ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾಗಳು ಅಳವಡಿಸಿರುವ ಬಗ್ಗೆ ವಿದ್ಯಾರ್ಥಿನಿಯರು ಆತಂಕಗೊಂಡಿದ್ದಾರೆ. ಘಟನೆ ಸಂಬಂಧ ಈಗಾಗಲೇ ಸಿಎಂ ತನಿಖೆಗೆ ಆದೇಶಿಸಿದ್ದಾರೆ. ಜತೆಗೆ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ ಎಂದು ಸಚಿವ ಕೊಳ್ಳು ರವೀಂದ್ರ ತಿಳಿಸಿದ್ದಾರೆ.
ಕ್ಯಾಮೆರಾ ಪತ್ತೆಯಾದ ಬೆನ್ನಲ್ಲೇ ಸರ್ಕಾರದ ವಿರುದ್ಧ ವಿಪಕ್ಷ ವೈಎಸ್‌ಆರ್‌ಸಿಪಿ ಪ್ರತಿಭಟನೆ ನಡೆಸಿದೆ. ಇತ್ತ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.