ಹೈಕಮಾಂಡ್ : ಯಾರಿಗೆ ಮೇಲುಗೈ-ಯಾರಿಗೆ ಹಿನ್ನಡೆ?

Webdunia
ಬುಧವಾರ, 25 ಮೇ 2022 (09:34 IST)
ಬಿಜೆಪಿಯ ನಾಲ್ಕು ಅಭ್ಯರ್ಥಿಗಳ ಪಟ್ಟಿ ಹೊರಬೀಳುತ್ತಿದ್ದಂತೆ ಯಾರ ಕೈ ಮೇಲಾಗಿದೆ ಎಂಬ ಬಿಜೆಪಿಆರಂಭವಾಗಿದೆ.

ನಾಲ್ವರ ಪೈಕಿ ಮೂವರು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅಭ್ಯರ್ಥಿಗಳು ಎನ್ನಲಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕೇಶವಪ್ರಸಾದ್ ಮತ್ತು ಹೇಮಲತಾ ಅವರ ಆಯ್ಕೆಯಲ್ಲಿ ಸಂತೋಷ್ ಕೈ ಮೇಲಾಗಿದೆ. ಇನ್ನು ನಾರಾಯಣಸ್ವಾಮಿ ಆಯ್ಕೆಯಲ್ಲೂ ಅವರ ಕೈಚಳಕ ನಡೆದಿದೆ ಎನ್ನಲಾಗಿದೆ.

ಇದೇ ವೇಳೆ ತಮ್ಮ ಆಪ್ತರಾದ ಗೀತಾ ವಿವೇಕಾನಂದ, ನಿರ್ಮಲ್ ಸುರಾನಾ , ನಂದೀಶ್, ಸಿದ್ದರಾಜು ಅವರಿಗೆ ಟಿಕೆಟ್ ಕೊಡಿಸಲು ಸಂತೋಷ್ ಅವರಿಗೆ ಸಾಧ್ಯವಾಗಿಲ್ಲವಾದರೂ ಹೆಚ್ಚಿನ ಆಯ್ಕೆಯಲ್ಲಿ ಅವರೇ ಮುನ್ನಡೆ ಸಾಧಿಸಿದ್ದಾರೆ.

ಇದರ ಜೊತೆಗೆ ಬಿಎಸ್ ವೈ ಪುತ್ರ ವಿಜಯೇಂದ್ರ ಸೇರಿದಂತೆ ಯಡಿಯೂರಪ್ಪ ಬಣದ ಯಾರಿಗೂ ಅವಕಾಶ ಸಿಕ್ಕಿಲ್ಲ. ಹೀಗಾಗಿ ಬಿಎಸ್ವೈಗೆ ಈ ಬಾರಿಯ ಟಿಕೆಟ್ ಹಂಚಿಕೆಯಲ್ಲಿ ಭಾರೀ ಹಿನ್ನಡೆಯಾಗಿದೆ.

ಇದೇ ವೇಳೆ ಪರಿಷತ್ ಟಿಕೆಟ್ ವಂಚಿತ ನಿರ್ಮಲ್ ಸುರಾನಾ ಹಾಗೂ ಗೀತಾ ವಿವೇಕಾನಂದ ಅವರಿಗೆ ರಾಜ್ಯಸಭೆ ಟಿಕೆಟ್ ಕೊಡಿಸಲು ಬಿಎಲ್ ಸಂತೋಷ್ ಪ್ರಯತ್ನ ನಡೆಸಿದ್ದಾರೆ. ಅದೂ ಕೂಡ ಕೈಗೂಡಿದರೆ ಅವರು ರಾಜ್ಯ ಬಿಜೆಪಿ ವಿಚಾರದಲ್ಲಿ ಇನ್ನಷ್ಟು ಪ್ರಬಲರಾಗಿ ಬಿಎಸ್ ವೈ ಬಣದ ಕೆಂಗಣ್ಣಿಗೆ ಗುರಿಯಾಗಲಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ಜೈಪುರದಲ್ಲಿ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಬಿತ್ತು ಏಟು, ಏನಿದು ಘಟನೆ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಮಿಳು ಸಿಎಂ ವಿಜಯ್ ಭೇಟಿ ಬೆನ್ನಲ್ಲೇ ಅನಂತ್ ಅಂಬಾನಿ ಭೇಟಿ, ವಿಶೇಷ ಪೂಜೆ

ನೋಂದಣಿ, ಹಣಕಾಸು ವಹಿವಾಟು ಬಗ್ಗೆ ಸ್ಪಷ್ಟನೆ ಕೇಳಿ ಭಾಗವತ್‌ಗೆ ಪ್ರಶ್ನೆ ಮುಂದಿಟ್ಟ ಪ್ರಿಯಾಂಕ್ ಖರ್ಗೆ

Video, ತಾನೊಬ್ಬ ನಟಿಯಾಗಿದ್ದರು ರಶ್ಮಿಕಾ ಮಂದಣ್ಣಳನ್ನು ಕೃತಿ ಎಷ್ಟು ಕೇರ್ ಮಾಡಿದ್ರು ನೋಡಿ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಮುಂದಿನ ಸುದ್ದಿ
Show comments