Select Your Language

Notifications

webdunia
webdunia
webdunia
webdunia

ಯಾಸಿನ್ ಮಲಿಕ್ಗೆ ಹೈಕೋರ್ಟ್ ನೋಟಿಸ್

ಮರಣದಂಡನೆ
ನವದೆಹಲಿ , ಮಂಗಳವಾರ, 30 ಮೇ 2023 (08:50 IST)
ನವದೆಹಲಿ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ್ದ ಪ್ರಕರಣದಲ್ಲಿ ಮರಣದಂಡನೆ ವಿಧಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಮಾಡಿದ ಮನವಿಯ ಮೇರೆಗೆ ದೆಹಲಿ ಹೈಕೋರ್ಟ್ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ.
 
ನ್ಯಾಯಮೂರ್ತಿ ಸಿದ್ಧಾರ್ಥ್ ಮೃದುಲ್ ಮತ್ತು ತಲ್ವಂತ್ ಸಿಂಗ್ ಅವರ ಪೀಠವು ಪ್ರಸ್ತುತ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಲಿಕ್ನನ್ನು ಆಗಸ್ಟ್ 9ರ ಒಳಗಾಗಿ ಕೋರ್ಟ್ಗೆ ಹಾಜರುಪಡಿಸುವಂತೆ ಆದೇಶದಲ್ಲಿ ತಿಳಿಸಿದೆ. ಎನ್ಐಎ ಪರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು,

ಆರೋಪಿಯು ಭಯೋತ್ಪಾದಕ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಅಲ್ಲದೆ ಈ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ ಅಪರಾಧಿಗೆ ಮರಣದಂಡನೆ ನೀಡಬೇಕು ಎಂದು ವಾದಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಗೂಗಲ್ ಸ್ಟ್ರೀಟ್ ವ್ಯೂ ಈಗ ಇಡೀ ಭಾರತದಲ್ಲಿ ಲಭ್ಯ