Select Your Language

Notifications

webdunia
webdunia
webdunia
webdunia

ಹಿಮಾಚಲ ಬಿಜೆಪಿ ಸಿಎಂ ಅಭ್ಯರ್ಥಿಗೆ ಸೋಲು

ಹಿಮಾಚಲ ಬಿಜೆಪಿ ಸಿಎಂ ಅಭ್ಯರ್ಥಿಗೆ ಸೋಲು
ನವದೆಹಲಿ , ಸೋಮವಾರ, 18 ಡಿಸೆಂಬರ್ 2017 (12:21 IST)
ಹಿಮಾಚಲ ಪ್ರದೇಶದ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ ಕುಮಾರ ಧುಮಾಲ್ ಸೋಲು ಕಂಡಿದ್ದಾರೆ.
 
ಹಿಮಾಚಲ ಪ್ರದೇಶದ 68 ಸ್ಥಾನಗಳಲ್ಲಿ ಬಿಜೆಪಿಇ 44 ಸ್ಥಾನಗಳಲ್ಲಿ ಮುನ್ನಡೆ ಪಡೆಯುವ ಮೂಲಕ ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಸ್ಥಾಪಿಸಲು ದಾಪುಗಾಲು ಹಾಕುತ್ತಿದ್ದರೆ, ಮತ್ತೊಂದೆಡೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯೇ ಸೋಲು ಕಂಡಿದ್ದಾರೆ.

ಸುಜಾನ್ ಪುರದಲ್ಲಿ ಎರಡು ಸಾವಿರ ಮತಗಳ ಅಂತರದಿಂದ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ ಕುಮಾರ ಧುಮಾಲ್ ಸೋಲು ಅನುಭವಿಸಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದ 68 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 20 ಹಾಗೂ ಇತರರು 4 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್‌ನಲ್ಲಿ ಸತತ ಆರನೇ ಗೆಲುವಿನತ್ತ ಬಿಜೆಪಿ