Select Your Language

Notifications

webdunia
webdunia
webdunia
webdunia

ಹಿಮಾಚಲ ಪ್ರದೇಶ ಚುನಾವಣೆ ದಿನಾಂಕ ಘೋಷಣೆ

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2018
ನವದೆಹಲಿ , ಗುರುವಾರ, 12 ಅಕ್ಟೋಬರ್ 2017 (16:30 IST)
ಹಿಮಾಚಲ ಪ್ರದೇಶ ಚುನಾವಣೆ ದಿನಾಂಕವನ್ನು ಚುನಾವಣೆ ಆಯೋಗ ಇಂದು ಘೋಷಿಸಿದೆ. ಗುಜರಾತ್ ಚುನಾವಣೆ ದಿನಾಂಕ ಇಂದು ಘೋಷಿಸಲಾಗುತ್ತಿಲ್ಲ ಎಂದು ಕೇಂದ್ರ ಚುನಾವಣೆ ಆಯೋಗ ತಿಳಿಸಿದೆ.
ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗದ ಮುಖ್ಯ ಚುನಾವಣೆ ಆಯುಕ್ತ ಎ.ಕೆ.ಜ್ಯೋತಿ ಸುದ್ದಿಗೋಷ್ಠಿ ನಡೆಸಿ,  ಹಿಮಾಚಲಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 9 ರಂದು ಚುನಾವಣೆ ನಡೆಯಲಿದ್ದು,ಡಿಸೆಂಬರ್ 18 ರಂದು ಚುನಾವಣೆ ನಡೆಯಲಿದೆ ಎಂದು ಘೋಷಿಸಿದ್ದಾರೆ.
 
ರಾಜ್ಯದಲ್ಲಿ ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ. ರಾಜ್ಯದಲ್ಲಿ ಒಟ್ಟು 7521 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಮತದಾನಕ್ಕೆ ಭಾವಚಿತ್ರವಿರುವ ಗುರುತಿನ ಚೀಟಿ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.
 
ಎಲ್ಲಾ ಮತದಾನ ಕೇಂದ್ರಗಳಲ್ಲಿ ವೋಟರ್ ವೆರಿಫಿಕೇಶನ್ ಪೇಪರ್ ಆಡಿಟ್ ಟ್ರಯಲ್ ಮತದಾನ ಯಂತ್ರವಿರಲಿದೆ ಎಂದು ಕೇಂದ್ರ ಚುನಾವಣೆ ಆಯೋಗದ ಮುಖ್ಯ ಚುನಾವಣೆ ಆಯುಕ್ತ ಎ.ಕೆ.ಜ್ಯೋತಿ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಕಸ್ಮಿಕವಾಗಿ ಮಹಿಳೆಯರ ಶೌಚಾಲಯ ಪ್ರವೇಶಿಸಿದ ರಾಹುಲ್ ಗಾಂಧಿ