Select Your Language

Notifications

webdunia
webdunia
webdunia
webdunia

ಹಿಂಡನ್‍ಬರ್ಗ್: ಮೂರು ತಿಂಗಳಲ್ಲಿ ತನಿಖೆಯ ಪ್ರಗತಿ ತೋರಿಸಲು ಸೆಬಿಗೆ ಸುಪ್ರೀಂ ಸೂಚನೆ

ಹಿಂಡನ್‍ಬರ್ಗ್: ಮೂರು ತಿಂಗಳಲ್ಲಿ ತನಿಖೆಯ ಪ್ರಗತಿ ತೋರಿಸಲು ಸೆಬಿಗೆ ಸುಪ್ರೀಂ ಸೂಚನೆ
ನವದೆಹಲಿ , ಗುರುವಾರ, 18 ಮೇ 2023 (10:04 IST)
ನವದೆಹಲಿ : ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಹಿಂಡನ್ಬರ್ಗ್ ಸಂಶೋಧನಾ ವರದಿಯಲ್ಲಿನ ಆರೋಪಗಳ ಕುರಿತಾದ ತನಿಖೆಯ ಸ್ಥಿತಿಗತಿಯ ವರದಿಯನ್ನು ಆಗಸ್ಟ್ 14 ರಂದು ನೀಡುವಂತೆ ಸೆಬಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.
 
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಈ ಆದೇಶವನ್ನು ನೀಡಿದೆ. ಆದೇಶ ವೇಳೆ ನ್ಯಾಯಾಲಯ ಸೆ.30ರ ವರೆಗೂ ತನಿಖೆಗೆ ಅವಕಾಶ ನೀಡಬಹುದು ಆದರೆ ನಿಗದಿಪಡಿಸಲಾದ ಅವಧಿಯಲ್ಲಿ ತನಿಖೆಯ ಪ್ರಗತಿಯನ್ನು ತಿಳಿಸಬೇಕು ಎಂದು ಸಿಜೆಐ ಸೂಚಿಸಿದರು.

ಹಿಂಡನ್ಬರ್ಗ್ ವರದಿಯಲ್ಲಿ ಉಲ್ಲೇಖಿಸಲಾದ 12 ಸಂಶಯಾಸ್ಪದ ವಹಿವಾಟುಗಳ ತನಿಖೆಗೆ ಕನಿಷ್ಠ 15 ತಿಂಗಳ ತನಿಖೆ ಅಗತ್ಯವಿದೆ. ಆದರೆ ಆರು ತಿಂಗಳು ಅವಕಾಶ ವಿಸ್ತರಿಸಿದರೆ ತನಿಖೆ ಪೂರ್ಣಗೊಳಿಸುವುದಾಗಿ ಕಳೆದ ತಿಂಗಳು ಸೆಬಿ ಸಲ್ಲಿಸಿದ್ದ ಮನವಿಯಲ್ಲಿ ಹೇಳಿತ್ತು. ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕೋರ್ಟ್ 6 ತಿಂಗಳ ಕಾಲಾವಕಾಶವನ್ನು ನೀಡಲು ನಿರಾಕರಿಸಿತ್ತು.

ನಿವೃತ್ತ ನ್ಯಾಯಮೂರ್ತಿ ಎಎಂ ಸಪ್ರೆ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಬೇಸಿಗೆಯ ರಜೆಯ ನಂತರ ಪ್ರಕರಣದ ವಿಚಾರಣೆಗೆ ಎತ್ತಿಕೊಳ್ಳಲಾಗುವುದು ಎಂದು ಕೋರ್ಟ್ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಡೆಲ್ ಹೇರ್‌ಸ್ಟೈಲ್‌ ಹಾಳು ಮಾಡಿದ್ದಕ್ಕೆ 2 ಕೋಟಿ ಪರಿಹಾರ !