Select Your Language

Notifications

webdunia
webdunia
webdunia
webdunia

ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ ಕರೆ

ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ ಕರೆ
ನವದೆಹಲಿ , ಭಾನುವಾರ, 2 ಜುಲೈ 2017 (09:50 IST)
ನವದೆಹಲಿ: ಅನಾಮಧೇಯ ವ್ಯಕ್ತಿಯಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಕರೆಬಂದಿದ್ದು ಕೆಲಕಾಲ ಆಂತಕದ ವಾತಾವರಣ ನಿರ್ಮಾಣವಾಗಿತ್ತು.
 
ವ್ಯಕ್ತಿಯೊಬ್ಬ ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಕರೆ ಮಾಡಿ, ಕಚೇರಿಯೊಳಗೆ ಬಾಂಬ್ ಇರಿಸಲಾಗಿದೆ ಎಂದು ಹೇಳಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಬಾಂಬ್ ನಿಷ್ಕ್ರಿಯ ದಳ ತೀವ್ರ ತಪಾಸಣೆ ನಡೆಸಿದ್ದಾರೆ. ಆದರೆ, ಗಂಟೆಗಳ ಕಾಲ ತಪಾಸಣೆ ನಡೆಸಿದರೂ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ದೊರಕಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
 
ಪುಣೆ ಮೂಲದ ಸೆಲ್ಯೂಲರ್ ಕಂಪನಿ ಮೂಲದ ಸಂಖ್ಯೆಯಿಂದ ಕರೆ ಬಂದಿತ್ತು. ಆದರೆ, ಕಂಪನಿ ಕುರಿತಂತೆ ಈ ವರೆಗೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ ಪ್ರಗತಿ ಸ್ವಚ್ಛ ತೆರಿಗೆ ಪದ್ಧತಿ ಮೇಲೆ ನಿಂತಿದೆ: ಮೋದಿ