ಮಹಾರಾಷ್ಟ್ರ: ಮಹಾರಾಷ್ಟ್ರದ ಮಹಾಲುಂಗೆ ಎಂಐಡಿಸಿ ಪೊಲೀಸ್ ಠಾಣಾ ವ್ಯಾಪ್ತಿಯ ಪಾಪಲ್ವಾಡಿ ಗ್ರಾಮದಲ್ಲಿ ಸೋಮವಾರ ಪಿಕ್ ಅಪ್ ವ್ಯಾನ್ 25-30 ಅಡಿ ಇಳಿಜಾರಿನಲ್ಲಿ ಬಿದ್ದ ಪರಿಣಾಮ ಏಳು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಏಳು ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಕುಂದೇಶ್ವರದ ಪಿಂಪ್ರಿ ಚಿಂಚ್‌ವಾಡ್ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿಈ ದುರಂತ ಘಟನೆ ಸಂಭವಿಸಿದೆ.
ಶ್ರಾವಣ ಸೋಮವಾರದ ದರ್ಶನಕ್ಕೆ ಭೇಟಿ ನೀಡುತ್ತಿದ್ದ ಭಕ್ತರನ್ನು ಕರೆದೊಯ್ಯುತ್ತಿದ್ದ ಪಿಕಪ್ ವಾಹನ ಅಪಘಾತಕ್ಕೀಡಾಗಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆ ತೀವ್ರ ದುಃಖ ತಂದಿದೆ.
ಅವರ ಕುಟುಂಬದವರ ದುಃಖದಲ್ಲಿ ಭಾಗಿಯಾಗುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಸಂತಾಪಗಳು ಅವರೊಂದಿಗಿವೆ" ಎಂದು ದೇವೇಂದ್ರ ಫಡ್ನವಿಸ್ ಅವರು 'ಎಕ್ಸ್' ನಲ್ಲಿ ಬರೆದಿದ್ದಾರೆ.
ಸಂತ್ರಸ್ತರ ಕುಟುಂಬಗಳಿಗೆ ರಾಜ್ಯ ಸರ್ಕಾರ 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಿದೆ ಮತ್ತು ಅಪಘಾತದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ಹೇಳಿದ್ದಾರೆ.
ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರ ಸಂಪೂರ್ಣ ಚಿಕಿತ್ಸೆಗಾಗಿ ವ್ಯವಸ್ಥೆ ಮಾಡಲಾಗುತ್ತಿದೆ ಮತ್ತು ನಾನು ವೈಯಕ್ತಿಕವಾಗಿ ಪೊಲೀಸ್ ಕಮಿಷನರ್ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ" ಎಂದು 'ಎಕ್ಸ್'ನಲ್ಲಿ ಬರೆದುಕೊಂಡಿದ್ದಾರೆ.