ಆಘಾತಕಾರಿ! ನರ್ಸರಿ ಬಾಲೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕ ಚಾಲಕ

Webdunia
ಗುರುವಾರ, 27 ಜುಲೈ 2017 (20:06 IST)
ನರ್ಸರಿ ಓದುತ್ತಿದ್ದ ನಾಲ್ಕು ವರ್ಷದ ಬಾಲೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ವ್ಯಾನ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
 
ದೆಹಲಿ ಹೊರವಲಯದಲ್ಲಿರುವ ಬಾಬಾ ಹರಿದಾಸ್ ನಗರ‌ದಲ್ಲಿ ಘಟನೆ ನಡೆದಿದೆ. 26 ವರ್ಷದ ವ್ಯಾನ್ ಚಾಲಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಪೋಷಕರ ಪ್ರಕಾರ, ಬಾಲೆಯನ್ನು ಶಾಲೆಯಿಂದ ಕರೆತರಲು ವ್ಯಾನ್ ನಿಗದಿಪಡಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳನ್ನು ಮನೆಗೆ ಬಿಟ್ಟ ನಂತರ ಚಾಲಕ ಕೊನೆಯದಾಗಿ ಬಾಲೆಯನ್ನು ಮನೆಗೆ ಕರೆತರುತ್ತಿದ್ದ. ಇಂದು ಬಾಲಕಿ ಶಾಲಾ ವ್ಯಾನ್‌ನಿಂದ ಇಳಿದಾಗ ಕಾಲುಗಳಲ್ಲಿ ರಕ್ತ ಸೋರುತ್ತಿತ್ತು. ತಾಯಿ ಬಾಲಕಿಯನ್ನು ವಿಚಾರಿಸಿದಾಗ ಚಾಲಕನ ಹೇಯ ಕೃತ್ಯ ಬೆಳಕಿಗೆ ಬಂದಿದೆ.
 
ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
 
ಆರೋಪಿ ಚಾಲಕನನ್ನು ಮಧ್ಯರಾತ್ರಿ ಅದೇ ಪ್ರದೇಶದಲ್ಲಿ ಬಂಧಿಸಲಾಗಿದೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಬಾಲಕಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments