Select Your Language

Notifications

webdunia
webdunia
webdunia
webdunia

ಚಲಿಸುತ್ತಿರುವ ಕಾರಿನಲ್ಲಿಯೇ ಮಹಿಳೆಯ ಮೇಲೆ ಐವರು ಕಾಮುಕರಿಂದ ಗ್ಯಾಂಗ್‌ರೇಪ್

ಚಲಿಸುತ್ತಿರುವ ಕಾರಿನಲ್ಲಿಯೇ ಮಹಿಳೆಯ ಮೇಲೆ ಐವರು ಕಾಮುಕರಿಂದ ಗ್ಯಾಂಗ್‌ರೇಪ್
ಕೋಲ್ಕತಾ , ಮಂಗಳವಾರ, 31 ಮೇ 2016 (11:43 IST)
ದೆಹಲಿಯಲ್ಲಿ ನಡೆದ ನಿರ್ಭಯ ಅತ್ಯಾಚಾರ ಘಟನೆ ಇನ್ನೂ ಹಸಿರಾಗಿರುವಂತೆಯೇ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ನಗರದ ಪ್ರತಿಷ್ಠಿತ ಬಡಾವಣೆಯಾದ ಸಾಲ್ಟ್ ಲೇಕ್ ಸೆಕ್ಟರ್ ಪ್ರದೇಶದಲ್ಲಿ ಐವರು ಆರೋಪಿಗಳು ಚಲಿಸುತ್ತಿರುವ ಕಾರಿನಲ್ಲಿಯೇ ಮಹಿಳೆಯೊಬ್ಬಳ ಮೇಲೆ ಗ್ಯಾಂಗ್‌ರೇಪ್ ಎಸಗಿ ಪರಾರಿಯಾಗಿದ್ದಾರೆ. 
 
ಮಾಧ್ಯಮ ವರದಿಗಳ ಪ್ರಕಾರ, ಕಳೆದ ಮೂರು ವರ್ಷಗಳಿಂದ ಬಾಗೈಟಿ ಪ್ರದೇಶದಲ್ಲಿ ವಾಸಿಸುತ್ತಿದ್ದ ನೇಪಾಳ ಮೂಲದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಆರೋಪಿಗಳು ಆಕೆಯನ್ನು ಕಾರಿನಿಂದ ಹೊರಗೆ ಎಸೆದು ಪರಾರಿಯಾಗಿದ್ದರು. ಮಹಿಳೆ ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. 
 
ಗ್ಯಾಂಗ್‌ರೇಪ್‌ಗೊಳಗಾದ ಮಹಿಳೆ ರೆಸ್ಟುರಾಂಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಬಸ್‌ಗಾಗಿ ಕಾಯುತ್ತಿರುವಾಗ ಅಲ್ಲಿಗೆ ಬಂದ ಆರೋಪಿಗಳು ಆಕೆಗೆ ಲಿಫ್ಟ್ ಕೊಡುವುದಾಗಿ ಹೇಳಿದ್ದಾರೆ. ಆರೋಪಿಗಳ ಆಹ್ವಾನವನ್ನು ಸ್ವೀಕರಿಸಿದ ಮಹಿಳೆ ಕಾರಿನಲ್ಲಿ ಕುಳಿತಾಗ ಕಾರಿನಲ್ಲಿದ್ದ ಐವರು ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ ನಂತರ ಆಕೆಯನ್ನು ಸಾಲ್ಟ್‌ಲೇಕ್ ಸೆಕ್ಟರ್‌ನ ಬೈಸಾಕಿ ಪ್ರದೇಶದಲ್ಲಿ ಕಾರಿನಿಂದ ಹೊರಗೆ ಎಸೆದು ಪರಾರಿಯಾಗಿದ್ದಾರೆ.  
 
ಐವರು ಆರೋಪಿಗಳ ವಿರುದ್ಧ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದು  ಅವರ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

Share this Story:

Follow Webdunia kannada

ಮುಂದಿನ ಸುದ್ದಿ

ಸೇನಾಶಸ್ತ್ರಾಸ್ತ್ರ ಡಿಪೋದಲ್ಲಿ ಅಗ್ನಿ ಅಕಸ್ಮಿಕ: 17 ಸೈನಿಕರ ಸಾವು