ಕೋಲ್ಕತ್ತಾ: ಕೋಲ್ಕತ್ತ ನಗರದ ಮೆಚುಆಪಟ್ಟಿ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಂಗಳವಾರ ರಾತ್ರಿ ಹೋಟೆಲ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 15 ಮಂದಿ ಸಜೀವ ದಹನವಾಗಿದ್ದಾರೆ.
ಮಂಗಳವಾರ ರಾತ್ರಿ ಸುಮಾರು 7.30ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. 42 ರೂಮ್‌ಗಳಿದ್ದ ಹೋಟೆಲ್‌ನಲ್ಲಿ ಒಟ್ಟು 88 ಜನ ಇದ್ದರು. 10 ಅಗ್ನಿಶಾಮಕ ವಾಹನಗಳ ನೆರವಿನಿಂದ ನಸುವಿನ ಜಾವ 3.30ರ ವೇಳೆಗೆ ಬಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕದಳ ಅಧಿಕಾರಿ ತಿಳಿಸಿದ್ದಾರೆ.
ಮೃತರದಲ್ಲಿ ಮಹಿಳೆ ಮತ್ತು ಮಕ್ಕಳು ಸೇರಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ದುರ್ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಮೃತರಲ್ಲಿ 11 ಮಂದಿ ಪುರುಷರು ಸೇರಿದ್ದಾರೆ. ಇದುವರೆಗೆ ಎಂಟು ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ.
ಘಟನೆಗೆ ಕಾರಣ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಸ್ಥಳಕ್ಕೆ ಆಗಮಿಸಿರುವ ವಿಧಿವಿಜ್ಞಾನ ತಂಡವು ಸೂಕ್ಷ್ಮ ಪರಿಶೀಲನೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.