Publish Date: Tue, 27 Apr 2021 (08:37 IST)
Updated Date: Tue, 27 Apr 2021 (08:39 IST)
ನವದೆಹಲಿ : ತನ್ನ ಲೈಂಗಿಕ ಬೇಡಿಕೆಗಳನ್ನು ತಿರಸ್ಕರಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬಳನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ ಘಟನೆ ದೆಹಲಿಯ ಮನೆಯೊಂದರಲ್ಲಿ ನಡೆದಿದೆ.
ಮಹಿಳೆ ಮತ್ತು 7 ವರ್ಷದ ಮಗಳು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತಿ ಕೆಲಸದ ನಿಮಿತ್ತ ಬೇರೆ ಕಡೆ ಹೋಗಿದ್ದರು. ಈ ವಿಚಾರ ತಿಳಿದ ಮನೆಯ ಮಾಲೀಕನ ಮಗ ಕುಡಿದ ಮತ್ತಿನಲ್ಲಿ ಮಹಿಳೆಯ ಮನೆಗೆ ನುಗ್ಗಿ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ. ಇದಕ್ಕೆ ಆಕೆ ಒಪ್ಪದಿದ್ದಾಗ ಅವಳ ಗಂಟಲನ್ನು ಸೀಳಿ ಕೊಲೆ ಮಾಡಿದ್ದಾನೆ.
ತಾಯಿಯ ಸತ್ತ ದೇಹದ ಪಕ್ಕ ಕುಳಿತು ಅಳುತ್ತಿರುವ ಮಗುವಿನ ಶಬ್ದ ಕೇಳಿ ಪಕ್ಕದ ಮನೆಯವರು ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದಾಗ ಮಾಲೀಕನ ಮಗ ಸಿಕ್ಕಿಹಾಕಿಕೊಂಡಿದ್ದಾನೆ.