ನವದೆಹಲಿ : ಕಾಂಗ್ರೆಸ್ನಲ್ಲಿ ಎಷ್ಟು ಜನ ರೌಡಿಶೀಟರ್ಗಳಿದ್ದಾರೆ ಅಂತ ಮೊದಲು ಲೆಕ್ಕ ಹಾಕಲಿ, ಬಳಿಕ ಬಿಜೆಪಿ ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ಗೆ ತಿರುಗೇಟು ನೀಡಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ರೌಡಿಶೀಟರ್ ಸೈಲೆಂಟ್ ಸುನೀಲ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡಿದ್ದನ್ನು ಸಮರ್ಥಿಸಿಕೊಂಡರು.
ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಅವರು ಹಿರಿಯ ವಕೀಲ ಮುಕುಲ್ ರೊಹಟಗಿ ಅವರನ್ನು ಭೇಟಿ ಮಾಡಿ ವಾದ ಮಂಡಿಸುವ ಬಗ್ಗೆ ಚರ್ಚಿಸಿದರು.
ಭೇಟಿ ಬಳಿಕ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧ ಪಟ್ಟ ಹಾಗೆ ಈಗಾಗಲೇ ಎಲ್ಲವನ್ನು ಸಹ ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ.
ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ನಾಳೆ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ನಮಗೆ ತಿಳಿಸಿದ್ದಾರೆ.