ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

Krishnaveni K
ಶುಕ್ರವಾರ, 21 ನವೆಂಬರ್ 2025 (10:45 IST)
ನವದೆಹಲಿ: ಇದೀಗ ಕೇಂದ್ರ ಚುನಾವಣಾ ಆಯೋಗ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಅಸಲಿಗೆ ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ಪರಿಷ್ಕರಣೆ ನಡೆದಿತ್ತು ಎನ್ನುತ್ತಿದೆ ಅಂಕಿ ಅಂಶಗಳು.

ಈ ಹಿಂದೆ 1947 ರಿಂದ 2024 ರವರೆಗೆ ಒಟ್ಟು 12 ಬಾರಿ ಎಸ್ಐಆರ್ ಅಥವಾ ಮತಪಟ್ಟಿ ಪರಿಷ್ಕರಣೆ ನಡೆಸಲಾಗಿದೆ. ಈ ಪೈಕಿ 11 ಬಾರಿ ಕಾಂಗ್ರೆಸ್ ನೇತೃತ್ವದ ಸರ್ಕಾರವಿದ್ದಾಗಲೇ ನಡೆದಿದೆ. 2004 ರಲ್ಲಿ ಮನಮೋಹನ್ ಸಿಂಗ್ ಸರ್ಕಾರವಿದ್ದಾಗ ಕೊನೆಯ ಬಾರಿ ಮತಪಟ್ಟಿ ಪರಿಷ್ಕರಣೆ ನಡೆಸಲಾಗಿತ್ತು.

ಇದಾದ ಬಳಿಕ ಈಗ ಮೋದಿ ಸರ್ಕಾರದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಯುತ್ತಿದೆ. ಜವಹರಲಾಲ್ ನೆಹರೂ ನೇತೃತ್ವದಲ್ಲಿ1952, 1957 ಮತ್ತು 1961 ರಲ್ಲಿ ಎಸ್ಐಆರ್ ನಡೆಸಲಾಗಿತ್ತು. 1965 ರಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಆಡಳಿತವಿದ್ದಾಗ ನಡೆದಿತ್ತು. 1966 ಮತ್ತು 1983 ರಲ್ಲಿ ಇಂದಿರಾಂಧಿ ಕಾಲದಲ್ಲಿ ನಡೆದಿತ್ತು. 1987 ಮತ್ತು 1989 ರಲ್ಲಿ ರಾಜೀವ್ ಗಾಂಧಿ ಸರ್ಕಾರವಿದ್ದಾಗ ನಡೆದಿತ್ತು. 1993 ರಲ್ಲಿ ಮತ್ತು 1995 ರಲ್ಲಿ ಪಿವಿ ನರಸಿಂಹ ರಾವ್ ಸರ್ಕಾರವಿದ್ದಾಗ ಮತ್ತು 2002 ರಲ್ಲಿ ವಾಜಪೇಯಿ ಸರ್ಕಾರವಿದ್ದಾಗ ನಡೆದಿತ್ತು. 2004 ರಲ್ಲಿ ಕೊನೆಯ ಬಾರಿಗೆ ಮನಮೋಹನ್ ಸಿಂಗ್ ಸರ್ಕಾರವಿದ್ದಾಗ ನಡೆದಿತ್ತು. ಇದೀಗ ಮೋದಿ ಸರ್ಕಾರದಲ್ಲಿ ನಡೆಯುತ್ತಿದೆ.

ಹೀಗಾಗಿ ಮತಪಟ್ಟಿ ಪರಿಷ್ಕರಣೆ ಎನ್ನುವುದು ಹೊಸ ವಿಚಾರವೇನೂ ಅಲ್ಲ. ಅಕ್ರಮ ಮತ್ತು ನಿಷ್ಕ್ರಿಯ ಮತದಾರರನ್ನು ಗುರುತಿಸಿ ಪಟ್ಟಿಯಿಂದ ತೆಗೆಯುವುದು ಮತ್ತು ಸೇರ್ಪಡೆಗೊಳಿಸುವುದು ಸಹಜ ಪ್ರಕ್ರಿಯೆಯಾಗಿ ನಡೆದುಕೊಂಡು ಬಂದಿದೆ. ಆದರೆ ಈಗ ವಿರೋಧ ಪಕ್ಷಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿವೆ. ಎಸ್ಐಆರ್ ನಿಂದಾಗಿ ಬಿಜೆಪಿಗೆ ಲಾಭವಾಗುತ್ತಿದೆ ಮತ್ತು ಹೆಚ್ಚುವರಿ ಸೇರ್ಪಡೆಯಾಗುವ ಮತದಾನ ಪ್ರಮಾಣ ಹೆಚ್ಚಾಗುತ್ತಿದ್ದು ಇದರ ಲಾಭ ಬಿಜೆಪಿಗೆ ಆಗುತ್ತಿದೆ ಎನ್ನುವುದು ವಿಪಕ್ಷಗಳ ವಾದವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments