ಭಾರತ ಸರ್ಕಾರವು ಹೆಚ್ಚಿನ ಪರೀಕ್ಷೆ ನಡೆಸುವಂತೆ ಹಾಗೂ ಕೇಂದ್ರ ಸರ್ಕಾರ ಒದಗಿಸಿರುವ 23,000 ಕೋಟಿ ರೂ.
ಪ್ಯಾಕೇಜ್ ನಡಿ ಅಂಬ್ಯುಲೆನ್ಸ್ ಹಾಗೂ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.
 
 			
 
 			
			                     
							
							
			        							
								
																	ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ 32 ಸಾವಿರ ಕೋಟಿ ಹಣವನ್ನು ಆರೋಗ್ಯ ಮೂಲಭೂತ ಸೌಕರ್ಯಕ್ಕಾಗಿ ಎರಡನೆಯ ನಂತರ ಒದಗಿಸಿದೆ.
									
										
								
																	ಹಲವು ರಾಜ್ಯಗಳು ಇನ್ನೂ ಇದರ ಪ್ರಯೋಜನ ಪಡೆದಿಲ್ಲ. ಆರೋಗ್ಯ ಮೂಲಭೂತ ಸೌಕರ್ಯಗಳಾದ ಐಸಿಯು, ಆಕ್ಸಿಜನ್ ಪ್ಲಾಂಟ್, ಆಕ್ಸಿಜಿನೆಟೆಡ್ ಬೆಡ್ ಹಾಗೂ ಅಂಬುಲೆನ್ಸ್ ಸೇರಿದಂತೆ ಇತರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ರಾಜ್ಯಗಳು ಸಹ ತಮ್ಮ ಪಾಲನ್ನು ಸೇರಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿದೆ ಎಂದು ಸಲಹೆ ಕೊಟ್ಟರು.