Webdunia - Bharat's app for daily news and videos

Install App

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಸಾಲ ಪಡೆಯುವುದು ಹೇಗೆ

Krishnaveni K
ಗುರುವಾರ, 12 ಡಿಸೆಂಬರ್ 2024 (09:32 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯೂ ಒಂದು. ಈ ಯೋಜನೆಯಡಿ ಸಾಲ ಸೌಲಭ್ಯ ಪಡೆಯುವುದು ಹೇಗೆ ಎಂಬ ವಿವರ ಇಲ್ಲಿದೆ ನೋಡಿ.

ಬಡ ಮತ್ತು ಮಧ್ಯಮ ವರ್ಗದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವರ್ಗದ ಕುಶಲ ಕರ್ಮಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಕಳೆದ ವರ್ಷ ಈ ಯೋಜನೆಗೆ ಚಾಲನೆ ನೀಡಿತ್ತು. ಈ ಯೋಜನೆಯಡಿಯಲ್ಲಿ 5% ಬಡ್ಡಿದರದಲ್ಲಿ 3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.

ಯಾರು ಅರ್ಹರು
ಬಡಿಗ, ದೋಣಿ ತಯಾರಕರು, ಕುಂಬಾರರು, ಮೀನಿನ ಬಲೆ ತಯಾರಕರು, ಅಕ್ಕಸಾಲಿಗರು, ಶಿಲ್ಪಿಗಳು, ಕ್ಷೌರಿಕರು, ರಾಜಮೇಸ್ತ್ರಿಗಳು ಸೇರಿದಂತೆ 18 ಬಗೆಯ ಕುಶಲ ಕರ್ಮಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸ್ವಂತ ಉದ್ಯೋಗ ಅಥವಾ ಉದ್ದಿಮೆ ಸ್ಥಾಪಿಸಲು ಈ ಯೋಜನೆ ಸಹಾಯ ಮಾಡುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ https://pmvishwakarma.gov.in/ ಗೆ ಹೋಗಿ. ಇಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲಿ ಕೇಳುವ ಮಾಹಿತಿಗಳನ್ನು ಭರ್ತಿ ಮಾಡಬೇಕಾಗುತ್ತದೆ.

ಯಾವೆಲ್ಲಾ ದಾಖಲೆ ಬೇಕು
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಆದಾಯ ಪ್ರಮಾಣ ಪತ್ರ, ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್ ವಿವರ, ವಾಸಸ್ಥಳ ದೃಢೀಕರಣ ಪತ್ರಗಳನ್ನು ಹೊಂದಿರಬೇಕು. ಭಾರತೀಯ ಪ್ರಜೆಯಾಗಿ 18 ರಿಂದ 50 ವರ್ಷದೊಳಗಿನ ಕುಶಲ ಕರ್ಮಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments