Webdunia - Bharat's app for daily news and videos

Install App

ಹೆದ್ದಾರಿಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ಹೇಗೆ ಸಾಧ್ಯ?: ಸುಪ್ರೀಂ ಪ್ರಶ್ನೆ

Webdunia
ಶುಕ್ರವಾರ, 1 ಅಕ್ಟೋಬರ್ 2021 (10:49 IST)
ಹೊಸದಿಲ್ಲಿ : ಕೃಷಿ ಕಾಯ್ದೆಗಳ ವಿರುದ್ಧ ದಿಲ್ಲಿಯ ಗಡಿಗಳಲ್ಲಿ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ದಿಲ್ಲಿ-ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿನ ಹೆದ್ದಾರಿಗಳನ್ನು ನಿರ್ಬಂಧಿಸಿರುವ ಬಗ್ಗೆ ಗುರುವಾರ ಆಕ್ಷೇಪವನ್ನು ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲಯವು, ನ್ಯಾಯಾಂಗ ವೇದಿಕೆ,ಆಂದೋಲನ ಅಥವಾ ಸಂಸದೀಯ ಚರ್ಚೆಗಳ ಮೂಲಕ ಪರಿಹಾರವನ್ನು ಕಂಡುಕೊಳ್ಳಬಹುದು,ಆದರೆ ಹೆದ್ದಾರಿಗಳನ್ನು ಮುಚ್ಚಲು ಹೇಗೆ ಸಾಧ್ಯ? ಇದು ಶಾಶ್ವತ ಸಮಸ್ಯೆಯಾಗಬಾರದು ಎಂದು ಹೇಳಿತು.

ಹೆದ್ದಾರಿಗಳಲ್ಲಿ ನಿರ್ಬಂಧವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ನೊಯ್ಡಿ ನಿವಾಸಿ ಮೊನಿಕಾ ಅಗರವಾಲ್ ಅವರು, ನೊಯ್ಡದಿಂದ ದಿಲ್ಲಿಗೆ ಪ್ರಯಾಣಿಸುವಾಗ ತಾನು ಸಮಸ್ಯೆಗಳನ್ನು ಎದುರಿಸುತ್ತಿದ್ದೇನೆ. ಕೇವಲ 20 ನಿಮಿಷಗಳನ್ನು ತೆಗೆದುಕೊಳ್ಳುತ್ತಿದ್ದ ಮಾರ್ಗವನ್ನು ಕ್ರಮಿಸಲು ಈಗ ಎರಡು ಗಂಟೆಗಳು ಬೇಕಾಗುತ್ತಿವೆ ಎಂದು ಹೇಳಿದ್ದಾರೆ. ರಸ್ತೆ ನಿರ್ಬಂಧಗಳನ್ನು ತಡೆಯಲು ಸರ್ವೋಚ್ಚ ನ್ಯಾಯಾಲಯವು ವಿವಿಧ ನಿರ್ದೇಶಗಳನ್ನು ಹೊರಡಿಸಿದೆ,ಅದರೆ ಅವುಗಳ ಪಾಲನೆಯಾಗುತ್ತಿಲ್ಲ ಎಂದು ಅವರು ಅರ್ಜಿಯಲ್ಲಿ ವಾದಿಸಿದ್ದಾರೆ.
ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯವು ಅಂಗೀಕರಿಸಿರುವ ಕಾನೂನನ್ನು ಜಾರಿಗೊಳಿಸುವುದು ನಿಮ್ಮ ಕರ್ತವ್ಯವಾಗಿದೆ ಎಂದು ಕೇಂದ್ರ,ಹರ್ಯಾಣ,ಉತ್ತರ ಪ್ರದೇಶ ಮತ್ತು ದಿಲ್ಲಿ ಸರಕಾರಗಳಿಗೆ ಹೇಳಿದ ನ್ಯಾ.ಸಂಜಯ್ ಕೌಲ್ ಅವರ ನೇತೃತ್ವದ ಪೀಠವು,'ನಾವು ಯಾವುದೇ ನಿರ್ದೇಶನಗಳನ್ನು ಹೊರಡಿಸಿದರೆ ನಾವು ಕಾರ್ಯಾಂಗದ ಅಧಿಕಾರ ವ್ಯಾಪ್ತಿಯನ್ನು ಅತಿಕ್ರಮಿಸಿದ್ದೇವೆ ಎಂದು ನೀವು ಹೇಳುತ್ತೀರಿ. ಕಾನೂನನ್ನು ಹೇಗೆ ಜಾರಿಗೊಳಿಸಬೇಕು ಎನ್ನುವುದು ನಿಮ್ಮ ಜವಾಬ್ದಾರಿಯಾಗಿದೆ. ಅದನ್ನು ಜಾರಿಗೊಳಿಸಲು ನ್ಯಾಯಾಲಯಕ್ಕೆ ಯಾವುದೇ ಮಾರ್ಗವಿಲ್ಲ ' ಎಂದು ಕುಟುಕಿತು.
ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟಾವಧಿಗೆ ವಶದಲ್ಲಿರಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಪ್ರತಿಭಟನೆಗಳು ನಿಗದಿತ ಸ್ಥಳಗಳಲ್ಲಿಯೇ ನಡೆಯಬೇಕು ಎಂದು ಸರ್ವೋಚ್ಚ ನ್ಯಾಯಾಲಯವು ಕಳೆದ ವರ್ಷದ ಅಕ್ಟೋಬರ್ನಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರಿಂದ ದಿಲ್ಲಿಯ ಶಾಹೀನ್ ಬಾಗ್ ಪ್ರದೇಶದಲ್ಲಿ ರಸ್ತೆ ತಡೆಗೆ ಸಂಬಂಧಿಸಿದಂತೆ ನೀಡಿದ್ದ ತೀರ್ಪಿನಲ್ಲಿ ಹೇಳಿತ್ತು.
ಪ್ರತಿಭಟನಾನಿರತ ರೈತರೊಂದಿಗೆ ಮಾತುಕತೆಗಳನ್ನು ನಡೆಸಲು ಉನ್ನತ ಮಟ್ಟದ ಸಮಿತಿಯೊಂದನ್ನು ಕೇಂದ್ರವು ರಚಿಸಿದೆ,ಆದರೆ ಮಾತುಕತೆಗಳಲ್ಲಿ ಭಾಗಿಯಾಗಲು ಅವರು ನಿರಾಕರಿಸಿದ್ದಾರೆ ಎಂದು ಗುರುವಾರ ವಿಚಾರಣೆ ಸಂದರ್ಭದಲ್ಲಿ ಪೀಠಕ್ಕೆ ತಿಳಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು,ಪ್ರತಿಭಟನೆಗಳ ನೇತೃತ್ವ ವಹಿಸಿರುವ ರೈತ ಸಂಘಗಳನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಸೇರಿಸುವಂತೆ ಕೋರಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments