Select Your Language

Notifications

webdunia
webdunia
webdunia
webdunia

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆ

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆ
ನವದೆಹಲಿ , ಭಾನುವಾರ, 11 ಜೂನ್ 2023 (11:34 IST)
ನವದೆಹಲಿ : ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರದಿಂದ 273 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
 
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನುದಾನ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಉತ್ತರ ಕರ್ನಾಟಕದ ಜನತೆ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. 

ವಿಮಾನ ನಿಲ್ದಾಣದ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಪ್ರಸ್ತಾವನೆಗೆ ಸರ್ಕಾರ ಶೀಘ್ರವಾಗಿ ಸ್ಪಂದಿಸಿದೆ. 273 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್ನ ನೆಲ ಮತ್ತು ಮೊದಲ ಮಹಡಿಯನ್ನು 20,000 ಚದರ ಮೀಟರ್ಗೆ ವಿಸ್ತರಣೆ ಮಾಡಲಾಗುವುದು. ಇದರಿಂದ ದಟ್ಟಣೆಯ ಸಮಯದಲ್ಲಿ 1,400 ಜನರು ಏಕಕಾಲದಲ್ಲಿ (ಆಗಮಿಸುವ ಮತ್ತು ನಿರ್ಗಮಿಸುವ) ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಜುಲೈ 1 ರಿಂದ ಅನ್ನಭಾಗ್ಯ ಜಾರಿ : ಸಿದ್ದರಾಮಯ್ಯ