ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ ನಡೆಯುತ್ತಿದ್ದು, ಇದರ ಮೊದಲ ಭಾಗವಾಗಿ ಕಾರ್ಯಕಾರಿ ಸಮಿತಿಯನ್ನು ಬದಲು ಮಾಡಿದ್ದಲ್ಲದೇ ಕೇಂದ್ರ ಚುನಾವಣಾ ಪ್ರಾಧಿಕಾರವನ್ನು ಪುನರಚನೆ ಮಾಡಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಈ ನೂತನ ಆದೇಶ ಹೊರಡಿಸಿದ್ದು, ಇದರಲ್ಲಿ ರಾಜ್ಯದ ಉಸ್ತುವಾರಿ ಹೊತ್ತಿದ್ದ ಕೆ.ಸಿ.ವೇಣುಗೋಪಾಲ್ ಗೆ ಕೋಕ್ ನೀಡಲಾಗಿದ್ದು, ರಣದೀಪ್ ಸಿಂಗ್ ಸುರ್ಜೆವಾಲ್ ಗೆ ರಾಜ್ಯ ಉಸ್ತುವಾರಿಯ ಹೊಣೆ ವಹಿಸಲಾಗಿದೆ.
ದಿನೇಶ್ ಗುಂಡೂರಾವ್ ಅವರಿಗೆ ಗೋವಾ, ತಮಿಳುನಾಡು, ಪಾಂಡಿಚೇರಿ ಉಸ್ತುವಾರಿ ವಹಿಸಲಾಗಿದೆ.
ಮಹಾರಾಷ್ಟ್ರಕ್ಕೆ ಹೆಚ್.ಕೆ ಪಾಟೀಲ್ ಉಸ್ತುವಾರಿಗಳಾಗಿದ್ದಾರೆ.
ಮಾಜಿ ಸಚಿವ ಕೃಷ್ಣ ಬೈರೇಗೌಡ ಎಐಸಿಸಿ ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ಜೊತೆಗೆ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆಗಲು ಆಗುತ್ತಿವೆ.