ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಕೆಂಪು ಕೋಟೆ ಬಳಿ ಕಾರು ಸ್ಫೋಟದ ಬಗ್ಗೆ ಉನ್ನತ ಮಟ್ಟದ ಭದ್ರತಾ ಪರಿಶೀಲನೆ ನಡೆಸಿದರು ಮತ್ತು ಘಟನೆಯಲ್ಲಿ ಭಾಗಿಯಾಗಿರುವ "ಪ್ರತಿಯೊಬ್ಬ ಅಪರಾಧಿಗಳನ್ನು ಬೇಟೆಯಾಡುವಂತೆ" ಭದ್ರತಾ ಏಜೆನ್ಸಿಗಳಿಗೆ ನಿರ್ದೇಶನ ನೀಡಿದರು.
ಮಂಗಳವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ನಡೆದ ಭದ್ರತಾ ಪರಿಶೀಲನಾ ಸಭೆಯ ಮೊದಲ ಸುತ್ತಿನ ಸಭೆಯಲ್ಲಿ ಶಾ ಅವರ ನಿರ್ದೇಶನ ಬಂದಿದೆ.
ಗೃಹ ಸಚಿವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಇಂಟೆಲಿಜೆನ್ಸ್ ಬ್ಯೂರೋ ನಿರ್ದೇಶಕ ತಪನ್ ದೇಕಾ, ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮಹಾನಿರ್ದೇಶಕ ಸದಾನಂದ ವಸಂತ್ ಡೇಟ್ ಮತ್ತು ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ಉಪಸ್ಥಿತರಿದ್ದರು.
ನಿಧಾನಗತಿಯಲ್ಲಿ ಚಲಿಸುತ್ತಿದ್ದ ಹ್ಯುಂಡೈ ಐ 20ಕಾರು ಸ್ಫೋಟಗೊಂಡು 13ಮಂದಿ ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ.